ಉಡುಪಿ: ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪ್ರದೇಶದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3-4 ಗೋದಾಮುಗಳ ಮೇಲೆ ಗುರುವಾರ ಬೆಳಗ್ಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಬಳಸಲಾಗುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದೆ.
ದಾಳಿ ವೇಳೆ ರಾಸಾಯನಿಕ ಬಳಕೆಗೆ ಬಳಸುತ್ತಿದ್ದ ಪರಿಕರಗಳು ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎನ್ನಲಾದ ವಾಹನಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಾಳೆಹಣ್ಣುಗಳಿಗೆ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸುವುದು ಮತ್ತು ಬಣ್ಣ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️
