}

ಉಡುಪಿ ಬ್ಲಾಕ್ ಕಾಂಗ್ರೆಸ್ ಸಭೆ: SIR ಪರಿಷ್ಕರಣೆ, ಯುವಕರ ನೋಂದಣಿಗೆ ರಮೇಶ್ ಕಾಂಚನ್ ಕರೆ

suddilive.com
By -
0

 


ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಿ.ಎಲ್.ಎ-2ಗಳ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.


ಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತದ ಕುರಿತು ಬಿ.ಎಲ್.ಎ-2ಗಳಿಂದ ಮಾಹಿತಿ ಹಾಗೂ ಅಂಕಿ-ಅಂಶಗಳನ್ನು ಸಂಗ್ರಹಿಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ.ಸಿ. ವಿನಯರಾಜ್ ಅವರು ಸಭೆಗೆ ಆಗಮಿಸಿ, ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ SIR ಪ್ರಕ್ರಿಯೆ ಹಾಗೂ ಬಿ.ಎಲ್.ಎ-2ಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.


ಎಲ್ಲಾ ಬಿ.ಎಲ್.ಎ-2ಗಳು ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸುವಂತೆ ವಿನಯರಾಜ್ ಅವರು ಮಾರ್ಗದರ್ಶನ ನೀಡಿದರು.


ಇದೇ ವೇಳೆ ಯುವಕರನ್ನು ಪಕ್ಷದ ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಪರ್ಕಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಭಾರತ್ ಜೋಡೋ ಯುವಕರ ಸಂಘಟನೆ’ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ರಮೇಶ್ ಕಾಂಚನ್ ತಿಳಿಸಿದರು. ಪ್ರತಿ ಬೂತ್‌ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರನ್ನು ನೋಂದಣಿ ಮಾಡಿಸಲು ಹೆಚ್ಚಿನ ಮುತುವರ್ಜಿ ವಹಿಸುವಂತೆ ಅವರು ಕರೆ ನೀಡಿದರು.


ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಬೂತ್‌ಗಳ ಬಿ.ಎಲ್.ಎ-2ಗಳು ಉಪಸ್ಥಿತರಿದ್ದರು.


ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸತೀಶ್ ಕೊಡವೂರು ವಂದಿಸಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default