}

ಉಡುಪಿಯಲ್ಲಿ ‘ಕಲರ್ಸ್ ಆಫ್ ಶ್ರೀ ಕೃಷ್ಣ’ ಛಾಯಾಚಿತ್ರ ಸ್ಪರ್ಧೆ: ಗೆದ್ದವರಿಗೆ ₹10 ಸಾವಿರ ಬಹುಮಾನ

suddilive.com
By -
0

 


ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಉಡುಪಿಯಲ್ಲಿ ‘ಕಲರ್ಸ್ ಆಫ್ ಶ್ರೀ ಕೃಷ್ಣ’ ಹೆಸರಿನಲ್ಲಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ.


ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ಉಡುಪಿ ವಲಯದ ನೇತೃತ್ವದಲ್ಲಿ ಹಾಗೂ ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಈ ಸ್ಪರ್ಧೆ ನಡೆಯಲಿದೆ.


ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹10,000, ದ್ವಿತೀಯ ಬಹುಮಾನವಾಗಿ ₹5,000 ಹಾಗೂ ತೃತೀಯ ಬಹುಮಾನವಾಗಿ ₹3,000 ನಗದು ನೀಡಲಾಗುತ್ತದೆ. ಇದರೊಂದಿಗೆ ಐದು ಸಮಾಧಾನಕರ ಬಹುಮಾನಗಳು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಗಳನ್ನು ನೀಡಲಾಗುತ್ತದೆ.


ಸ್ಪರ್ಧೆಗೆ ಎಲ್ಲರಿಗೂ ಮುಕ್ತ ಅವಕಾಶವಿದ್ದು, ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು. ಪ್ರತಿ ಚಿತ್ರವು ಗರಿಷ್ಠ 4 ಎಂಬಿ ಗಾತ್ರದಲ್ಲಿರಬೇಕು. ಮೊಬೈಲ್‌ನಲ್ಲಿ ತೆಗೆದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಫೋಟೋಶಾಪ್‌ನಲ್ಲಿ ತಿರುಚಿದ ಅಥವಾ ವಾಟರ್‌ಮಾರ್ಕ್ ಹೊಂದಿರುವ ಚಿತ್ರಗಳಿಗೂ ಅವಕಾಶವಿಲ್ಲ. ನೋಂದಣಿ ಮಾಡಿದ ಬಳಿಕ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶ ಇರುವುದಿಲ್ಲ.


ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಸೆ. 4ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿ ಮಹೋತ್ಸವದ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು.


ಸ್ಪರ್ಧೆಯಲ್ಲಿ ಭಾಗವಹಿಸಲು ಸೆ. 1ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿತ ಎಲ್ಲ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್ ಉಚಿತವಾಗಿ ನೀಡಲಾಗುತ್ತದೆ. ಛಾಯಾಗ್ರಾಹಕರು ಆ ಟಿ-ಶರ್ಟ್ ಧರಿಸಿಯೇ ಚಿತ್ರ ತೆಗೆಯಬೇಕು.


ಛಾಯಾಚಿತ್ರಗಳನ್ನು ಸೆ. 15ರೊಳಗೆ rameshyelluru@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಇ-ಮೇಲ್‌ನಲ್ಲಿ ಸ್ಪರ್ಧಿಯ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಫಲಿತಾಂಶವನ್ನು ಸೆ. 25ರಂದು ಪ್ರಕಟಿಸಲಾಗುವುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರಲಿದೆ.


ಸ್ಪರ್ಧೆಗೆ ಸಲ್ಲಿಸಲಾದ ಛಾಯಾಚಿತ್ರಗಳನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಆಯೋಜಕರು ಹೊಂದಿರುತ್ತಾರೆ.


ಪ್ರಚಾರದ ಬಿತ್ತಿಪತ್ರ ಬಿಡುಗಡೆ


ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪ್ರಚಾರದ ಬಿತ್ತಿಪತ್ರವನ್ನು ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಎಸ್‌ಕೆಪಿಎ ಉಡುಪಿ ವಲಯದ ಅಧ್ಯಕ್ಷ ದಿವಾಕರ್ ಹಿರಿಯಡ್ಕ, ಮಾಜಿ ಅಧ್ಯಕ್ಷ ಜನಾರ್ದನ್ ಕೊಡವೂರು, ಸದಸ್ಯರಾದ ರತನ್ ಶೆಟ್ಟಿ, ಶ್ರೀಶ ಬಲ್ಲಾಳ್ ಹಾಗೂ ಶ್ರೀಕೃಷ್ಣ ಮಠದ ಛಾಯಾಗ್ರಾಹಕ ಕೃತಿಕ್ ಭಟ್ ಉಪಸ್ಥಿತರಿದ್ದರು.

About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default