ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಿಎಸ್‌ಐ ಅವರ ಸರ್ವೀಸ್ ಪಿಸ್ತೂಲ್ ಕಸಿದು ಗುಂಡು ಹಾರಿಸಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಸೋಮವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸರ ಗುಂಡೇಟಿನಿಂದ ಆರೋಪಿ ಅನುಜ್ ಪಾಟೀಲ್ (35) ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡೇವಿಡ್ ಹತ್ಯೆ ಪ್ರಕರಣದಲ್ಲಿ ಮೂವರು ಶೂಟರ್‌ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಮುಂಬೈನ ಕುಖ್ಯಾತ ಗ್ಯಾಂಗ್‌ಸ್ಟರ್ ಎಂದು ಗುರುತಿಸಲಾಗಿರುವ ಅನುಜ್ ಪಾಟೀಲ್‌ನನ್ನು ಬಂಧಿಸಲು ಕುಂದಾಪುರ ಠಾಣೆಯ ಪಿಎಸ್‌ಐ ನಂಜ ನಾಯಕ್, ಕೊಲ್ಲೂರು ಠಾಣೆಯ ಪಿಎಸ್‌ಐ ವಿನಯ್ ಹಾಗೂ ಸಿಬ್ಬಂದಿ ಸೋಮವಾರ ಬೆಳಗ್ಗೆ ಸುಮಾರು 6ರಿಂದ 6.30ರ ವೇಳೆಗೆ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಯನ್ನು ಬಂಧಿಸಿ ಕರೆದುಕೊಂಡು ಬರುತ್ತಿದ್ದ ವೇಳೆ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಕೊಲ್ಲೂರು ಠಾಣೆಯ ಪಿಎಸ್‌ಐ ವಿನಯ್ ಅವರ ಬಳಿಯಿದ್ದ ಆಯುಧವನ್ನು ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಠಾಣೆಯ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅನುಜ್ ಪಾಟೀಲ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಕಾರ, ಅನುಜ್ ಪಾಟೀಲ್ 2017ರಿಂದ ತಲೆಮರೆಸಿಕೊಂಡಿದ್ದು, ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅನುಜ್ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಡೇವಿಡ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಬಂಧಿತ ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

