}

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ : ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಧ್ವಜಾರೋಹಣ…!!

suddilive.com
By -
0



ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿದರು.


ಬಳಿಕ ಮಾತನಾಡಿದ ಅವರು, ದೇವಾಲಯಗಳಲ್ಲಿ ಪ್ರತಿದಿನ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಿ, ಅವುಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಉತ್ಪನ್ನಗಳಾಗಿ ಪರಿವರ್ತಿಸುವ ಯೋಜನೆಯನ್ನು ಜಿಲ್ಲಾಡಳಿತ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು. ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ಹೂವುಗಳಿಂದ ಅಗರಬತ್ತಿ, ಬಿದಿರು ರಹಿತ ಧೂಪದಕಡ್ಡಿ ಸೇರಿದಂತೆ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಉದ್ದೇಶ ಹೊಂದಲಾಗಿದೆ ಎಂದರು.


ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಉಡುಪಿಯ ಪ್ರವಾಸೋದ್ಯಮವನ್ನು ಪ್ರತಿನಿಧಿಸುವ ಕಾಲ್ಪನಿಕ ಮಾಸ್ಕಾಟ್‌ನ್ನು ಸಚಿವರು ಅನಾವರಣಗೊಳಿಸಿದರು. ಇದೇ ವೇಳೆ ‘ಉಡುಪಿ ಸುಗಂಧ’ ಉತ್ಪನ್ನವನ್ನೂ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಯಶಪಾಲ್ ಸುವರ್ಣ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಮಂಜುನಾಥ ಭಂಡಾರಿ, ಎಂ.ಎ. ಗಫೂರ್, ಅಶೋಕ್ ಕುಮಾರ್ ಕೊಡವೂರು, ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಇದಕ್ಕೂ ಮುನ್ನ ಸಚಿವರು ಆಕರ್ಷಕ ಪಥಸಂಚಲನ ವೀಕ್ಷಿಸಿ ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಉಡುಪಿ ಹಾಗೂ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳು അവതരിപ്പಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಚಿವರು ಸೇರಿದಂತೆ ಗಣ್ಯರು ವೀಕ್ಷಿಸಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default