ಉಡುಪಿ: ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಬ್ರಹ್ಮಾವರದ ಗಾಂಧಿನಗರ ಬೈಕಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಹತ್ಯೆಯಾದವರನ್ನು ಗಾಂಧಿನಗರ ನಿವಾಸಿ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಎಂದು ಗುರುತಿಸಲಾಗಿದೆ. ಅವರ ಪುತ್ರ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ರಾತ್ರಿ ಮನೆಯಲ್ಲೇ ತಂದೆ–ತಾಯಿಯೊಂದಿಗೆ ಶಾಹಿದ್ ಜಗಳವಾಡಿದ್ದು, ಬಳಿಕ ಸುತ್ತಿಗೆಯಿಂದ ಇಬ್ಬರ ತಲೆಗೆ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಂದೆ–ತಾಯಿ ತನಗೆ ನಿರಂತರವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ರಾತ್ರಿ ಸುಮಾರು 7 ಗಂಟೆ ವೇಳೆಗೆ ಘಟನೆ ನಡೆದಿದ್ದು, ಬಳಿಕ ಶಾಹಿದ್ ತಾನೇ 112ಕ್ಕೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ.
ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದಾಗ ಮೆಹಬೂಬ್ ಅಲಿ ಹಾಗೂ ಸಂಶದ್ ಬೇಗಂ ಮೃತಪಟ್ಟಿರುವುದು ಪತ್ತೆಯಾಗಿದೆ. ಬಳಿಕ ಶಾಹಿದ್ ಅಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಲಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣವೇನು ಹಾಗೂ ಘಟನೆಯ ಹಿಂದಿನ ಸಂಪೂರ್ಣ ವಿಚಾರವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

