ಉಡುಪಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಏಕಾಏಕಿ ಸುಮಾರು ಶೇ.80ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿ, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಆಗಸ್ಟ್ 4ರಂದು ನಡೆಯಲಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.
ಈ ಸಂಬಂಧ ಭಾನುವಾರ ಸಂಜೆ ಉಡುಪಿಯ ಲಕ್ಷ್ಮೀ ಸಭಾಭವನದಲ್ಲಿ ಸಂಘದ ತುರ್ತು ಸಭೆ ನಡೆಯಿತು. ಸಂಘದ ಅಧ್ಯಕ್ಷ ರಘುಪತಿ ಭಟ್ ಅವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಜಯಕರ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳದಿಂದ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದಸ್ಯರು ವಿಸ್ತೃತವಾಗಿ ಚರ್ಚಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಯೂನಿಯನ್ ಆಗಸ್ಟ್ 4ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಸಂಘ ಸಂಪೂರ್ಣ ಬೆಂಬಲ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಯಿತು.
ಪ್ರತಿಭಟನೆಯಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳವನ್ನು ಹಿಂಪಡೆಯಬೇಕು ಹಾಗೂ ಖಾಸಗಿ ವಾಹನಗಳಿಗೆ ನೀಡುವಂತೆ ಟ್ಯಾಕ್ಸಿ ವಾಹನಗಳಿಗೂ 10 ನಿಮಿಷಗಳ ಉಚಿತ ಪ್ರವೇಶ ಸೌಲಭ್ಯ ಕಲ್ಪಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿರಿಸಲಾಗುತ್ತಿದೆ.
ಈ ಹೋರಾಟವು ಟ್ಯಾಕ್ಸಿ ಚಾಲಕರ ಜೀವನೋಪಾಯ ಮತ್ತು ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಟ್ಯಾಕ್ಸಿ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಸಂಘ ಮನವಿ ಮಾಡಿದೆ.
ಸಭೆಯಲ್ಲಿ ಭಾಗವಹಿಸಿ ಸಲಹೆ ಮತ್ತು ಸಹಕಾರ ನೀಡಿದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಸಂಘದ ಪರವಾಗಿ ಪ್ರಧಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್ ಕೃತಜ್ಞತೆ ಸಲ್ಲಿಸಿದರು. ಪ್ರತಿಭಟನೆಗೆ ಸಂಬಂಧಿಸಿದ ಮುಂದಿನ ಕಾರ್ಯಕ್ರಮಗಳ ವಿವರವನ್ನು ಶೀಘ್ರದಲ್ಲೇ ಸದಸ್ಯರಿಗೆ ತಿಳಿಸಲಾಗುವುದು ಎಂದು ಸಂಘ ತಿಳಿಸಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

