}

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿ ನೀರುಪಾಲು

suddilive.com
By -
0

 



ಉಡುಪಿ, ಆ.25: ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.


ಮೃತನನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ. ಆತ ಕುಕ್ಕಿಕಟ್ಟೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.


ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆದಿತ್ಯ ಬಂದಿದ್ದ. ಈ ವೇಳೆ ಭಕ್ತರು ಕೆರೆಯ ನೀರಿಗೆ ಇಳಿದು ಈಜುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ಕೂಡ ನೀರಿಗೆ ಇಳಿದಿದ್ದ ಎನ್ನಲಾಗಿದೆ. ಆದರೆ ಆತನೊಂದಿಗೆ ಬಂದಿದ್ದ ಸಂಬಂಧಿಗೆ ಈಜಲು ಬಾರದ ಕಾರಣ ಆತ ಕೆರೆಗೆ ಇಳಿದಿರಲಿಲ್ಲ.


ಆದಿತ್ಯ ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದಾಗ ಏಕಾಏಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಕೂಡಲೇ ದೇವಸ್ಥಾನದವರು ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಅವರು ಕೆರೆಗೆ ಇಳಿದು ಶೋಧ ಕಾರ್ಯ ನಡೆಸಿದ್ದು, ಸುಮಾರು ಒಂದು ಗಂಟೆಯ ಕಾರ್ಯಾಚರಣೆ ಬಳಿಕ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಲಾಯಿತು.


ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಆದಿತ್ಯ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default