ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ಸಿ. ಜೋಸೆಫ್ ವಿಜಯ್ ವಿರುದ್ಧ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಶುಕ್ರವಾರ (ಆಗಸ್ಟ್ 7) ವಾಪಸ್ ಪಡೆಯಲಾಗಿದೆ. ಅರ್ಜಿ ಹಿಂಪಡೆಯುತ್ತಿದ್ದಂತೆ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಪ್ರಕರಣವನ್ನು ಇತ್ಯರ್ಥಗೊಳಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ಸಂಗೀತಾ, ತಾವು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆಯಲು ಬಯಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಲಯವು ಪ್ರಕರಣವನ್ನು ಮುಕ್ತಾಯಗೊಳಿಸಿದೆ.
ವಿಜಯ್ ಹಾಗೂ ಸಂಗೀತಾ ಅವರು 1999ರ ಆಗಸ್ಟ್ 25ರಂದು ಅಂತರ್‌ಧರ್ಮೀಯ ವಿವಾಹವಾಗಿದ್ದರು. ವಿಜಯ್ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾಗಿದ್ದರೆ, ಸಂಗೀತಾ ಹಿಂದೂ ಧರ್ಮದವರು. ದಂಪತಿಗೆ 2000ರ ಆಗಸ್ಟ್ 26ರಂದು ಮೊದಲ ಮಗ ಜನಿಸಿದ್ದು, 2005ರಲ್ಲಿ ಮಗಳು ಜನಿಸಿದ್ದರು.
ವಿಜಯ್ ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸಿ ರಾಜಕೀಯ ಪ್ರವೇಶಿಸಿದ ಬಳಿಕ, ಅವರ ವೈಯಕ್ತಿಕ ಜೀವನವೂ ಸಾರ್ವಜನಿಕ ಚರ್ಚೆಯ ವಿಷಯವಾಗಿತ್ತು. ಇದೇ ವೇಳೆ ವಿಜಯ್ ಅವರು ನಟಿಯೊಬ್ಬರೊಂದಿಗೆ ಹೊಂದಿದ್ದಾರೆ ಎನ್ನಲಾದ ಸಂಬಂಧದ ಕುರಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗಿದ್ದವು.
ಈ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ಸಂಗೀತಾ ಅವರು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯಲ್ಲಿ ಪತಿಯ ನಟಿಯೊಂದಿಗಿನ ನಂಟಿನ ಬಗ್ಗೆಯೂ ಪ್ರಸ್ತಾಪಿಸಲಾಗಿತ್ತು ಎನ್ನಲಾಗಿತ್ತು. ತಮಿಳುನಾಡು ವಿಧಾನಸಭಾ ಚುನಾವಣೆ ಸಮಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಕೆಯಾಗಿದ್ದರಿಂದ ಪ್ರಕರಣ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಕಾರಣವಾಗಿತ್ತು.
ಪ್ರಕರಣದ ವಿಚಾರಣೆ ವೇಳೆ ಹಲವು ಬಾರಿ ವಿಜಯ್ ಹಾಗೂ ಸಂಗೀತಾ ನ್ಯಾಯಾಲಯಕ್ಕೆ ಗೈರಾಗಿದ್ದರು. ಬಳಿಕ ಇಬ್ಬರೂ ಮುಕ್ತವಾಗಿ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಕೌಟುಂಬಿಕ ನ್ಯಾಯಾಲಯ ಸೂಚಿಸಿತ್ತು. ಇದೀಗ ಸಂಗೀತಾ ಅವರು ಅರ್ಜಿಯನ್ನು ಅಧಿಕೃತವಾಗಿ ಹಿಂಪಡೆದಿರುವುದರಿಂದ ಪ್ರಕರಣಕ್ಕೆ ತೆರೆ ಬಿದ್ದಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

