ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಹೋಗುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಕುಳಿತುಕೊಂಡಿದ್ದು, ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2)ರಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

