ದಕ್ಷಿಣ ಕನ್ನಡ: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರು ಮಂಗಳವಾರ (ಆ.25) ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಯಶ್ ಕೆಲಕಾಲ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ಬಳಿಕ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಯಶ್ ತಮ್ಮ ಸಿನಿಮಾಗಳ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡುವುದು ವಾಡಿಕೆ. ಪ್ರತಿ ಚಿತ್ರದ ಬಿಡುಗಡೆಯ ಮೊದಲು ಕ್ಷೇತ್ರಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಾರೆ. ಈ ಬಾರಿಯೂ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಚಿತ್ರದ ಕೆಲಸಗಳ ಒತ್ತಡದಿಂದಾಗಿ ಈ ಬಾರಿ ಕೊನೆಯ ಹಂತದಲ್ಲಿ ಕ್ಷೇತ್ರಕ್ಕೆ ಬರಲು ಸಾಧ್ಯವಾಯಿತು ಎಂದು ಅವರು ಹೇಳಿದರು.
ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯಶ್, ‘ಟಾಕ್ಸಿಕ್’ ಚಿತ್ರದ ಮುಂಗಡ ಬುಕಿಂಗ್‌ಗೆ ಸಿಗುತ್ತಿರುವ ಪ್ರತಿಕ್ರಿಯೆ ಕುರಿತು ಸಂತಸ ವ್ಯಕ್ತಪಡಿಸಿದರು. ಮುಂಗಡ ಬುಕಿಂಗ್‌ನಲ್ಲಿ ದಾಖಲೆ ನಿರ್ಮಿಸುತ್ತಿರುವುದಕ್ಕೆ ದೇವರ ಹಾಗೂ ಅಭಿಮಾನಿಗಳ ಆಶೀರ್ವಾದವೇ ಕಾರಣ ಎಂದು ಅವರು ಹೇಳಿದರು.
“ಇದೆಲ್ಲವೂ ಶ್ರೀ ಮಂಜುನಾಥ ಸ್ವಾಮಿ ಹಾಗೂ ಜನರ ಆಶೀರ್ವಾದ. ಇದರಲ್ಲಿ ನಮ್ಮದೇನೂ ಇಲ್ಲ. ಎಲ್ಲವೂ ದೇವರ ಮತ್ತು ಜನರ ಪ್ರೀತಿ. ಎಲ್ಲರಿಗೂ ಒಳ್ಳೆಯದಾಗಲಿ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೂ ಸದಾ ಇರಲಿ,” ಎಂದು ಯಶ್ ಹೇಳಿದರು.
ಸದ್ಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಬಿಡುಗಡೆಗೂ ಮುನ್ನವೇ ಮುಂಗಡ ಬುಕಿಂಗ್‌ನಲ್ಲಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಚಿತ್ರ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬ ಕುತೂಹಲವೂ ಹೆಚ್ಚಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️





