}

ಮಂಗಳೂರು: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳೇ ಟಾರ್ಗೆಟ್: ಡೀಸೆಲ್ ಕಳವು ಮಾಡುತ್ತಿದ್ದ ಇಬ್ಬರ ಬಂಧನ

suddilive.com
By -
0

 


ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೊಲೆರೋ ಪಿಕ್‌ಅಪ್ ವಾಹನ, ಡೀಸೆಲ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳು.


ಸೆಪ್ಟೆಂಬರ್ 3ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬೈಕ್‌ನಲ್ಲಿ ನೈಟ್ ರೌಂಡ್ಸ್ ಕರ್ತವ್ಯದಲ್ಲಿದ್ದರು. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ತಲುಪಿದಾಗ, ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಒಂದರ ಬಳಿ ಬೊಲೆರೋ ಪಿಕ್‌ಅಪ್ ವಾಹನ ನಿಂತಿರುವುದು ಹಾಗೂ ಪಕ್ಕದಲ್ಲಿ ಮೂವರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಪೊಲೀಸರ ಬೈಕ್ ಸದ್ದು ಕೇಳಿ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಜಾಗರೂಕರಾದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಹೆದ್ದಾರಿ ಬದಿ ನಿಲ್ಲಿಸುವ ವಾಹನಗಳ ಇಂಧನ ಟ್ಯಾಂಕ್‌ನಿಂದ ಡೀಸೆಲ್ ಕದಿಯುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ಥಳವನ್ನು ಪರಿಶೀಲಿಸಿದ ಪೊಲೀಸರು ಕಳ್ಳತನಕ್ಕೆ ಬಳಸಿದ್ದ ಬೊಲೆರೋ ಪಿಕ್‌ಅಪ್ ವಾಹನ, ಕ್ಯಾನ್‌ಗಳಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಕಳವಿಗೆ ಬಳಸುತ್ತಿದ್ದ ರಬ್ಬರ್ ಪೈಪ್ ಹಾಗೂ ಹಲವು ಖಾಲಿ ಕ್ಯಾನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ (ಅ.ಕ್ರ: 118/2026, ಕಲಂ: 35(1)(ಡಿ) ಬಿ.ಎನ್.ಎಸ್.ಎಸ್. ಮತ್ತು ಕಲಂ 303(2) ಬಿ.ಎನ್.ಎಸ್.) ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default