}

ಮಂಗಳೂರಿನ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ

suddilive.com
By -
0

 


ಕಳೆದ ಮೂರು ದಶಕಗಳಿಂದ ಕ್ರೀಡಾ ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ ಪ್ರತಿಷ್ಠಿತ 'ಬಸವಶ್ರೀ' ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ರಜತ ಮಹೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಜಗದೀಶ್ಚಂದ್ರ ಅವರಿಗೆ ಚಿನ್ನ ಹಾಗೂ ಬೆಳ್ಳಿ ಪದಕದೊಂದಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.


ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ತಮ್ಮ ಅಂಕಣಗಳ ಮೂಲಕ ನಿರಂತರವಾಗಿ ಕಟ್ಟಿಡುತ್ತಿರುವ ಅಂಚನ್ ಅವರ ಬರಹಗಳನ್ನು ಸಮಾರಂಭದಲ್ಲಿ ಮುಕ್ತಕಂಠದಿಂದ ಶ್ಲಾಘಿಸಲಾಯಿತು. ಇದೇ ವೇಳೆ ಬೆಂಗಳೂರಿನ ಆರ್.ಎನ್.ಎಸ್. ಕಾಲೇಜು ಮತ್ತು ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮಿಗಳು, ನೃತ್ಯ ಕಲಾವಿದ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್ ಸೇರಿದಂತೆ ಹಲವು ರಂಗಗಳ ಗಣ್ಯರು ಉಪಸ್ಥಿತರಿದ್ದರು.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default