ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಗಂಗರ ಕಾಲಕ್ಕೆ ಸೇರಿದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ.
ಇಂಚಲ ಗ್ರಾಮದ ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವೇಳೆ ಗಡಿಗೆಯೊಂದರಲ್ಲಿ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಒಟ್ಟು 54.8 ಗ್ರಾಂ ತೂಕ ಇದೆ ಪತ್ತೆಯಾದ ಬಂಗಾರದ ಮೌಲ್ಯ ಅಂದಾಜು ಮೌಲ್ಯ ಸುಮಾರು 8.27 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಣ್ಯಗಳು ದೊರೆತ ಕೂಡಲೇ ಅವುಗಳನ್ನು ತಮ್ಮಲ್ಲೇ ಇಟ್ಟುಕೊಳ್ಳದೆ ಕೂಲಿ ಕಾರ್ಮಿಕರು ತಾಲೂಕು ಆಡಳಿತದ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಅವರ ಪ್ರಾಮಾಣಿಕತೆಗೆ ತಾಲೂಕು ಆಡಳಿತದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿಯ ಸಮ್ಮುಖದಲ್ಲಿ ನಾಣ್ಯಗಳನ್ನು ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ತಹಶೀಲ್ದಾರ್ ಅವರು ಎಲ್ಲ ನಾಣ್ಯಗಳನ್ನು ಖಜಾನೆಗೆ ಒಪ್ಪಿಸಿದ್ದಾರೆ.
ಪತ್ತೆಯಾದ 14 ನಾಣ್ಯಗಳ ಮೇಲೂ ಆನೆಯ ಚಿತ್ರವಿದ್ದು, ಇವು ಕ್ರಿ.ಶ. 10ರಿಂದ 15ನೇ ಶತಮಾನದ ಅವಧಿಗೆ ಸೇರಿದವುಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ನಾಣ್ಯಗಳ ನಿಖರ ಕಾಲಘಟ್ಟ, ಮೂಲ ಹಾಗೂ ಐತಿಹಾಸಿಕ ಮಹತ್ವವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಜ್ಞರ ಪರಿಶೀಲನೆಯ ಬಳಿಕ ಖಚಿತಪಡಿಸಿಕೊಳ್ಳಬೇಕಿದೆ.
ನಾಣ್ಯಗಳು ದೊರೆತ ತಕ್ಷಣ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರ ನಡೆಗೆ ತಾಲೂಕು ಆಡಳಿತ ಶ್ಲಾಘನೆ ವ್ಯಕ್ತಪಡಿಸಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

