ಮಾಜಿ ಸಚಿವ ಹಾಗೂ ಹಾಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಜೀವ ಬೆದರಿಕೆಯೊಡ್ಡುವ ರೀತಿಯ ಪೋಸ್ಟ್ ಹಂಚಿಕೊಂಡಿದ್ದ ಆರೋಪದಡಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂದು ಗುರುತಿಸಲಾಗಿದೆ. ಶಾಸಕರನ್ನು ಗುರಿಯಾಗಿಸಿಕೊಂಡು ‘ತಲೆ ಬೇಕು’ ಎಂಬರ್ಥದಲ್ಲಿ ಪ್ರಚೋದನಕಾರಿಯಾಗಿ ಸಾಮಾಜಿಕ ಮಾಧ್ಯಮದಲ್ಲಿ ಈತ ಬರೆದುಕೊಂಡಿದ್ದ , ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಾರ್ಕಳ ಗ್ರಾಮಾಂತರ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಚೋದನಕಾರಿ ಬರಹದ ಹಿಂದಿರುವ ಉದ್ದೇಶ ಹಾಗೂ ಇದರ ಹಿಂದೆ ಇತರರ ಕೈವಾಡವಿದೆಯೇ ಎಂಬ ಆಯಾಮದಲ್ಲೂ ತನಿಖೆ ಮುಂದುವರಿದಿದೆ.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

