}

‘ವಂದೇ ಮಾತರಂ’ ವಿವಾದ: ಸೆಪ್ಟೆಂಬರ್ 15ರಿಂದ ರಾಜ್ಯಾದ್ಯಂತ ಬಿಜೆಪಿ ಪಾದಯಾತ್ರೆ

suddilive.com
By -
0



ಬೆಂಗಳೂರು: ಮುಡಾ ಹಗರಣದ ವಿರುದ್ಧ ‘ಮೈಸೂರು ಚಲೋ’ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ತೊಡೆತಟ್ಟಿದ್ದ ಬಿಜೆಪಿ, ಇದೀಗ ಮತ್ತೊಂದು ಸುತ್ತಿನ ರಾಜಕೀಯ ಸಮರಕ್ಕೆ ಅಣಿಯಾಗಿದೆ. ರಾಜ್ಯದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಚಿವ ಸಂಪುಟ ನಿರ್ಧರಿಸಿರುವುದನ್ನು ವಿರೋಧಿಸಿ, ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.


ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕಾಗಿ ರಾಷ್ಟ್ರಗೀತೆಗೆ ಸಮಾನವಾದ ‘ವಂದೇ ಮಾತರಂ’ ಅನ್ನು ಮೊಟಕುಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ವಂದೇ ಮಾತರಂ ಕೇವಲ ಒಂದು ಹಾಡಲ್ಲ, ಅದು ದೇಶದ ಸ್ವಾತಂತ್ರ್ಯ ಸಂಗ್ರಾಮದ ಭಾವನಾತ್ಮಕ ಪ್ರತೀಕ. ಇಂತಹ ಗೀತೆಯನ್ನು ಸಂಪುಟ ಮಟ್ಟದಲ್ಲಿ ಚರ್ಚಿಸಿ ಕೇವಲ ಎರಡೇ ಚರಣಕ್ಕೆ ಸೀಮಿತಗೊಳಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿ ಕಾರಿದ್ದಾರೆ.


ಈ ಆದೇಶವನ್ನು ರಾಜ್ಯ ಸರ್ಕಾರ ಬೇಷರತ್ತಾಗಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಹಮ್ಮಿಕೊಂಡಿರುವ ಈ ಹೋರಾಟದಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅರ್ಧದಿಂದ ಒಂದು ಕಿಲೋಮೀಟರ್‌ವರೆಗೆ ಮುಖಂಡರು ಮತ್ತು ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಪಾದಯಾತ್ರೆಯ ಮುಕ್ತಾಯದ ವೇಳೆ ಆಯಾ ತಾಲೂಕುಗಳ ತಹಶೀಲ್ದಾರ್ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರದ ಮೇಲೆ ತೀವ್ರ ರಾಜಕೀಯ ಮತ್ತು ಆಡಳಿತಾತ್ಮಕ ಒತ್ತಡ ಹೇರಲು ಕೇಸರಿ ಪಡೆ ಸಜ್ಜಾಗಿದೆ.

About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default