}

ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ: ಸುರ್ಜೇವಾಲಾ‌ಗೆ ಹೊಸ ಜವಾಬ್ದಾರಿ

suddilive.com
By -
0

 


ನವದೆಹಲಿ: ಮುಂಬರುವ  ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು  ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹಲವು ರಾಜ್ಯಗಳ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಅನುಭವಿ ಹಾಗೂ ಯುವ ನಾಯಕರಿಗೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಲಾಗಿದೆ.


ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಹಿರಿಯ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ  ಗುಜರಾತ್‌ ರಾಜ್ಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಕರ್ನಾಟಕದ ಜೊತೆಗೆ ಗುಜರಾತ್‌ ರಾಜ್ಯದ ಉಸ್ತುವಾರಿಯನ್ನೂ ಅವರು ನಿರ್ವಹಿಸಲಿದ್ದಾರೆ.


ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರನ್ನು ಅಸ್ಸಾಂನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಸ್ತುವಾರಿಯಾಗಿ ನೇಮಿಸಲಾಗಿದೆ. ಬಿಜೆಪಿಯ ಪ್ರಭಾವವಿರುವ ಅಸ್ಸಾಂನಲ್ಲಿ ಕಾಂಗ್ರೆಸ್‌ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಇದೀಗ ಬಘೇಲ್‌ ಅವರ ಮೇಲಿದೆ.


ಇನ್ನು ರಾಜಸ್ಥಾನದ ಯುವ ನಾಯಕ ಸಚಿನ್‌ ಪೈಲಟ್‌ ಅವರಿಗೆ ಪಂಜಾಬ್‌ನ ಉಸ್ತುವಾರಿ ವಹಿಸಲಾಗಿದೆ. 


2027ರ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಈಗಿನಿಂದಲೇ ಸಂಘಟನಾ ಚಟುವಟಿಕೆಗಳಿಗೆ ವೇಗ ನೀಡಲು ಮುಂದಾಗಿದೆ. ಪ್ರಮುಖ ರಾಜ್ಯಗಳಲ್ಲಿ ಅನುಭವಿ ನಾಯಕರ ಜೊತೆಗೆ ಯುವ ಮುಖಗಳಿಗೂ ಜವಾಬ್ದಾರಿ ನೀಡುವ ಮೂಲಕ ಪಕ್ಷದ ಕಾರ್ಯತಂತ್ರವನ್ನು ಬಲಪಡಿಸಲು ಹೈಕಮಾಂಡ್‌ ಮುಂದಾಗಿದೆ.

 ಈ ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default