}

ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹ: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಯತ್ನಿಸಿದ ಜೆಡಿಎಸ್‌ ಕಾರ್ಯಕರ್ತರು

suddilive.com
By -
0


ಬೆಂಗಳೂರು: ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಕ್ವೀನ್ಸ್‌ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್‌ ಕಚೇರಿಗೆ (ಕೆಪಿಸಿಸಿ) ಮುತ್ತಿಗೆ ಹಾಕಿದರು.


ಗ್ರೇಟರ್‌ ಬೆಂಗಳೂರು ಜೆಡಿಎಸ್‌ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ನೇತೃತ್ವದಲ್ಲಿ ನಡೆದ ಈ ಮುತ್ತಿಗೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.


ಬಹುತೇಕ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಸಮೀಪಕ್ಕೆ ಬಾರದಂತೆ ಅಲ್ಲಲ್ಲಿ ತಡೆದರು. ಕೆಪಿಸಿಸಿ ಕಚೇರಿಗೆ ನುಗ್ಗಲೆತ್ನಿಸಿದ ಕಾರ್ಯಕರ್ತರನ್ನು ಬ್ಯಾರಿಗೇಡ್‌ಗಳನ್ನು ಅಡ್ಡಲಾಗಿ ಹಾಕಿ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು. ಬ್ಯಾರಿಗೇಡ್‌ಗಳನ್ನು ನೂಕಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹಲವು ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ ಸರಕಾರದ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಎಂ. ರಮೇಶ್‌ ಗೌಡರು; ನಾವು ಶಾಂತಿಯುತವಾಗಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಶಾಂತಿಭಂಗ ಉಂಟು ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ. ಆದರೂ ಪೊಲೀಸರು ನಮ್ಮನ್ನು ವಶಕ್ಕೆ ಪಡೆದಿರುವುದು ಸರಿಯಲ್ಲ ಎಂದರು.ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಾಯಕರು ಮತ್ತು ಜೆಡಿಎಸ್‌ ಪಕ್ಷದ ಬಗ್ಗೆ ಕೆಟ್ಟದ್ದಾಗಿ ಪೋಸ್ಟ್‌ʼಗಳನ್ನು ಹಾಕುವುದು, ಗೋಡೆಗಳ ಮೇಲೆ ಅವಹೇಳನಕಾರಿ ಪೋಸ್ಟರ್‌ʼಗಳನ್ನು ಅಂಟಿಸುವುದು, ವಿಧಾನಸೌಧದ ಬಳಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸುವ ಕಾಂಗ್ರೆಸ್‌ ಪಕ್ಷದ ಮುಖಂಡರುಗಳ ಮೇಲೆ ಯಾವುದೇ ಕ್ರಮ ಜರುಗಿಸದ ಪೊಲೀಸರು, ಜೆಡಿಎಸ್‌ ಕಾರ್ಯಕರ್ತರ ಮೇಲೆ ವೀರಾವೇಶದಿಂದ ಕೇಸು ದಾಖಲಿಸುತ್ತಾರೆ ಎಂದು ಾವರು ಹೇಳಿದರು.ಕೆಪಿಎಸ್ಸಿ ಅಕ್ರಮಗಳಲ್ಲಿ ತೊಡಗಿದ್ದು, ಅದಕ್ಕೆ ಸರಕಾರವು ಸಾಥ್‌ ನೀಡುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯಲ್ಲಿ ನಡೆದಿರುವ ಅಕ್ರಮ ಆಯ್ಕೆ, ನೇಮಕಾತಿಗಳೇ ಇದಕ್ಕೆ ಕಾರಣ ಎಂದು ದೂರಿದ ರಮೇಶ್‌ ಗೌಡ, ಇದಕ್ಕೆ ಸಂಬಂಧಪಟ್ಟ ಎಲ್ಲರ ತಲೆದಂಡವಾಗಬೇಕು ಎಂದು ಒತ್ತಾಯಿಸಿದರು.ಒಂದು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡದಿದ್ದರೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ ಅವರು; ರೆಸಾರ್ಟ್‌ ನಲ್ಲಿ ಪರೀಕ್ಷೆ ಬರೆದು ಅಕ್ರಮವಾಗಿ ಹುದ್ದೆ ಗಿಟ್ಟಿಸಿರುವ ಎಲ್ಲರನ್ನೂ ಕೆಲಸದಿಂದ ಕಿತ್ತೆಸೆಯಬೇಕು ಹಾಗೂ ಅದರಲ್ಲಿ ಶಾಮೀಲಾದ ಎಲ್ಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default