}

IAS ಅಧಿಕಾರಿ ಜ್ಞಾನೇಂದ್ರ ಬಂಧನದ ಬೆನ್ನಲ್ಲೇ ಬಯಲಾಯ್ತು KPSC ಅಕ್ರಮದ ಜಾಲ; ಕನ್ನಾಳೆ ಮನೆ ಸೀಜ್

suddilive.com
By -
0



KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ  ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸಿಐಡಿ ಅಧಿಕಾರಿಗಳ ವಿಚಾರಣೆ ವೇಳೆ ಒಂದೊಂದೇ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. IAS ಅಧಿಕಾರಿ ಜ್ಞಾನೇಂದ್ರ ಬಂಧನದ ಬೆನ್ನಲ್ಲೇ, ಪ್ರಕರಣದ ಮತ್ತೊಬ್ಬ ಪ್ರಮುಖ ಕಿಂಗ್‌ಪಿನ್ ಬಸವರಾಜ್ ಕನ್ನಾಳೆ ಮತ್ತು ಆತನ ಜಾಲದ ಅಸಲಿ ಮುಖ ಬಯಲಾಗಿದೆ.


₹40 ಲಕ್ಷಕ್ಕೆ ಒಂದೊಂದು ಹುದ್ದೆ ಸೇಲ್!

ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಬಲೆಗೆ ಬಿದ್ದಿರುವ ಅಭ್ಯರ್ಥಿಗಳು ಸತ್ಯ ಒಪ್ಪಿಕೊಂಡಿದ್ದಾರೆ.


ಪಶುವೈದ್ಯಾಧಿಕಾರಿ ಹುದ್ದೆಗೆ ತಲಾ ₹30 ರಿಂದ ₹40 ಲಕ್ಷಕ್ಕೆ ಡೀಲ್ ಕುದುರಿಸಲಾಗಿತ್ತು. ವಾಟ್ಸಾಪ್ ಕಾಲ್ ಮೂಲಕ ಸಂಪರ್ಕಿಸಿ, ರಾಜಾಜಿನಗರದ ಕಚೇರಿಯೊಂದರಲ್ಲಿ ಹಣದ ವಹಿವಾಟು ನಡೆಸಲಾಗಿತ್ತು. ಪರೀಕ್ಷೆಗೂ ಮೊದಲೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡಿ, ಬೆಂಗಳೂರು, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ವಿಶೇಷ ತರಬೇತಿ ನೀಡಲಾಗಿತ್ತು!


IAS ಅಧಿಕಾರಿ ಜ್ಞಾನೇಂದ್ರ - ಕನ್ನಾಳೆ ದಂಧೆಯ ನೆಟ್‌ವರ್ಕ್


ಜ್ಞಾನೇಂದ್ರ ಬೀದರ್‌ನಲ್ಲಿ ಪ್ರೊಬೇಷನರಿಯಾಗಿದ್ದ ಕಾಲದಿಂದಲೇ ಬಸವರಾಜ್ ಕನ್ನಾಳೆ ಜೊತೆ ಸಂಪರ್ಕದಲ್ಲಿದ್ದ.


ಪಶುವೈದ್ಯಾಧಿಕಾರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವುದು ಮತ್ತು ಪ್ರಿಂಟಿಂಗ್ ಹೊಣೆಯನ್ನು ಜ್ಞಾನೇಂದ್ರ ಹೊತ್ತಿದ್ದ.


ಪರೀಕ್ಷೆಗೆ ಒಂದು ವಾರ ಮುಂಚೆಯೇ 1 ಸೆಟ್ ಪ್ರಶ್ನೆಪತ್ರಿಕೆಯನ್ನು ಕನ್ನಾಳೆಗೆ ನೀಡಿದ್ದು, ಆತ ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿ ಜ್ಞಾನೇಂದ್ರನಿಗೆ ತಲುಪಿಸಿದ್ದಾನೆ ಎನ್ನಲಾಗಿದೆ.


ಮನೆ ಸೀಜ್, ಸಾಕ್ಷ್ಯಗಳ ಜಪ್ತಿ

ಪ್ರಕರಣದ ಬೆನ್ನುಬಿದ್ದಿರುವ ಸಿಐಡಿ, ಬೆಂಗಳೂರಿನ ವಿನಾಯಕ ಲೇಔಟ್‌ನಲ್ಲಿರುವ ಕನ್ನಾಳೆ ನಿವಾಸವನ್ನು ಸೀಜ್ ಮಾಡಿದೆ. ಮನೆಯಲ್ಲಿದ್ದ ಸಿಸಿಟಿವಿ ಡಿವಿಆರ್ ಹಾಗೂ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ 10 ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದು, 6 ಅಭ್ಯರ್ಥಿಗಳ ಹೇಳಿಕೆಯನ್ನು ಅಧಿಕೃತವಾಗಿ ದಾಖಲಿಸಿಕೊಳ್ಳಲಾಗಿದೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default