}

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು

suddilive.com
By -
0

 


ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಹಗರಣ ಬೆಳಕಿಗೆ ಬರುತ್ತಿದ್ದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.


ಕೋರ್ಟ್ ಗೆ ಹಾಜರುಪಡಿಸಿದ್ದ ವೇಳೆ ನ್ಯಾಯಾಲಯ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಈ ಹಿಂದೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಹಾಗೂ ಸಿಐಡಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಅಕ್ರಮದ ಬಗ್ಗೆ ಕೆಲ ಪುರಾವೆಗಳು ಪತ್ತೆಯಾಗಿವೆ. ಅಲ್ಲದೇ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು 48 ಗಂಟೆಗಳು ಕಳೆದಿರುವ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಪಾತ್ರದ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ.


ತನಿಖೆ ವೇಳೆ OMR ಉತ್ತರ ಪತ್ರಿಕೆಗಳ ತಿದ್ದುಪಡಿ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಲಾಗಿದೆ. ಮಧ್ಯವರ್ತಿ ಬಸವರಾಜ್ ಕನ್ನಾಳೆ ಜತೆ ಜ್ಞಾನೇಂದ್ರ ಕುಮಾರ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪವೂ ತನಿಖೆಯಲ್ಲಿ ಕೇಳಿಬಂದಿದೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default