}

ಕೆರೆ ಮುಚ್ಚಿ ಅಪಾರ್ಟ್ಮೆಂಟ್ ನಿರ್ಮಾಣ: ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

Prajwal amin
By -
0


 ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ತಾವು ಬಿಡುಗಡೆ ಮಾಡಿರುವ ದಾಖಲೆಗಳು ಕೇವಲ ಆರಂಭವಷ್ಟೇ, ಮುಂದಿನ ದಿನಗಳಲ್ಲಿ ಭಾಗ-2 ಮತ್ತು ಭಾಗ-3ರ ಮೂಲಕ ಮತ್ತಷ್ಟು ಸ್ಪೋಟಕ ವಿಚಾರಗಳನ್ನು ಬಯಲಿಗೆಳೆಯುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.


ಇಂದು ಖಾಸಗಿ  ಹೋಟೆಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದರು , ನೈಸ್ ಮೂಲ ಒಪ್ಪಂದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಹಿ ಹಾಕಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ, 2003-04ರ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಸಚಿವರಾಗಿದ್ದಾಗ ಫ್ರೇಮ್‌ವರ್ಕ್ ಅಗ್ರಿಮೆಂಟ್‌ನಲ್ಲಿ (ಮೂಲ ಒಪ್ಪಂದ) ಭಾರೀ ತಿದ್ದುಪಡಿಗಳನ್ನು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ  ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ಹೇಳಿದರು 


ಯೋಜನೆಗಾಗಿ ಅಧಿಸೂಚನೆಗೊಂಡಿದ್ದ ಜಮೀನಿನಲ್ಲಿ ನಡೆದಿರುವ ಅಕ್ರಮಗಳತ್ತ ಬೊಟ್ಟು ಮಾಡಿರುವ ಕುಮಾರಸ್ವಾಮಿ, ಶಿವಕುಮಾರ್ ಅವರ ಕುಟುಂಬಸ್ಥರು ಸಂಬಂಧಪಟ್ಟ ಅಧಿಕಾರಿಗಳಿಂದ ಎನ್‌ಒಸಿ ಪಡೆದು ಸುಮಾರು 150ರಿಂದ 200 ಎಕರೆ ಜಮೀನನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ, ಇದೇ ಜಾಗದಲ್ಲಿ ಶೋಭಾ ಡೆವಲಪರ್ಸ್ ಜತೆಗೂಡಿ ಬೃಹತ್ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲಾಗಿದೆ ಹಾಗೂ ಇದಕ್ಕಾಗಿ ಕೆರೆಗಳನ್ನೇ ಮುಚ್ಚಲಾಗಿದೆ ಎಂದು ಕಿಡಿಕಾರಿದ್ದಾರೆ.


ನೈಸ್ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಯಾವ ಆಧಾರದ ಮೇಲೆ ಕೈಬಿಡಲಾಯಿತು, ಯಾರಿಗೆಲ್ಲಾ ಎನ್‌ಒಸಿ ನೀಡಲಾಯಿತು ಮತ್ತು ಆ ಜಾಗವನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದರ ಬಗ್ಗೆ ತಕ್ಷಣವೇ ಸ್ಪಷ್ಟನೆ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು .ತಮ್ಮ ಬಳಿ ಇರುವ ಭ್ರಷ್ಟಾಚಾರದ ಕಂತುಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡುವುದಾಗಿ ಅವರು ಸವಾಲು ಹಾಕಿದ್ದಾರೆ.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default