ಬ್ರಹ್ಮಾವರ: ಪುತ್ರನನ್ನು ಸ್ಕೂಟರ್‌ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಬಸ್‌ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಅವರ ಪುತ್ರ ಗಂಭೀರವಾಗಿ ಗಾಯಗೊಂಡ ಘಟನೆ ಮಾಬುಕಳ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ಮೂಲತಃ ಕಿರಿಮಂಜೇಶ್ವರದ, ಪ್ರಸ್ತುತ ಮಟಪಾಡಿ ನಿವಾಸಿ ರವಿರಾಜ್ (49) ಎಂದು ಗುರುತಿಸಲಾಗಿದೆ. ಅವರ ಪುತ್ರ ಅನಿಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರ ತಾಲೂಕಿನ ಕೋಟದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಅನಿಲ್ ವ್ಯಾಸಂಗ ಮಾಡುತ್ತಿದ್ದರು. ತರಗತಿಗೆ ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ರವಿರಾಜ್ ಅವರು ಸ್ಕೂಟರ್‌ನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಬ್ರಹ್ಮಾವರದಿಂದ ಕುಂದಾಪುರದತ್ತ ತೆರಳುತ್ತಿದ್ದ ಬಸ್‌ವೊಂದು ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಿದ ಬಳಿಕ ಯಾವುದೇ ಮುನ್ಸೂಚನೆ ನೀಡದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ನಿಂತಿದೆ . ಇದರಿಂದ ಸ್ಕೂಟರ್ ನಿಯಂತ್ರಣ ತಪ್ಪಿ ಬಸ್‌ನ ಬಲಭಾಗದ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಬ್ರಹ್ಮಾವರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ರವಿರಾಜ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡಿರುವ ಅನಿಲ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಸ್ಥಳೀಯರು ಸ್ಥಳದಲ್ಲೇ ಆಕ್ರೋಶ ವ್ಯಕ್ತಪಡಿಸಿ ಚಾಲಕನನ್ನು ತರಾಟೆಗೆ ತೆಗೆದುಕೊಂಡರು.
ರವಿರಾಜ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

