ಮಂಡ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಹಾಗೂ ಬಿಸಿಎಂ ಹಾಸ್ಟೆಲ್‌ನ ಮಾಜಿ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಮದ್ದೂರಿನ ವಿನಾಯಕ ಬಡಾವಣೆಯಲ್ಲಿರುವ ಶಿವರಾಜು ಅವರ ಮನೆ ಹಾಗೂ ಅವಸರಹಳ್ಳಿಯಲ್ಲಿರುವ ಫಾರಂ ಹೌಸ್‌ನಲ್ಲಿ ಏಕಕಾಲದಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ. ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.
ಶಿವರಾಜು ಅವರು ಕಳೆದ ತಿಂಗಳಷ್ಟೇ ಮದ್ದೂರಿನಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ಸಾಮಗ್ರಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆ ವೇಳೆ ಮನೆಯಲ್ಲಿ ದುಬಾರಿ ಮದ್ಯದ ಬಾಟಲಿಗಳು, ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ . ಪತ್ತೆಯಾಗಿರುವ ವಸ್ತುಗಳು ಹಾಗೂ ವಿವಿಧ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ದಾಳಿ ವೇಳೆ ದೊರೆತ ದಾಖಲೆಗಳು ಮತ್ತು ವಸ್ತುಗಳ ಸಂಪೂರ್ಣ ಪರಿಶೀಲನೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ತಿಳಿದುಬಂದಿದೆ.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

