}

ಮಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ: ಕನಿಷ್ಠ ದರ ₹40ಕ್ಕೆ ನಿಗದಿ

suddilive.com
By -
0

 



ಮಂಗಳೂರು: ನಗರದಲ್ಲಿ ಆಟೋರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಇನ್ನು ಮುಂದೆ ಕನಿಷ್ಠ 1.5 ಕಿಲೋಮೀಟರ್ ಪ್ರಯಾಣಕ್ಕೆ ₹40 ಪಾವತಿಸಬೇಕಾಗುತ್ತದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಅಧ್ಯಕ್ಷ ದರ್ಶನ್ ಎಚ್.ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.


ಪರಿಷ್ಕೃತ ದರದಂತೆ, ಗರಿಷ್ಠ ಮೂವರು ಪ್ರಯಾಣಿಕರಿಗೆ 1.5 ಕಿಲೋಮೀಟರ್‌ವರೆಗೆ ₹40 ದರ ನಿಗದಿಪಡಿಸಲಾಗಿದೆ. ಇದಾದ ಬಳಿಕ ಪ್ರತಿ ಹೆಚ್ಚುವರಿ ಕಿಲೋಮೀಟರ್‌ಗೆ ₹20 ಶುಲ್ಕ ವಿಧಿಸಲು ಅವಕಾಶ ನೀಡಲಾಗಿದೆ.


ಈ ಹಿಂದೆ ಮಂಗಳೂರಿನಲ್ಲಿ ಆಟೋರಿಕ್ಷಾದ ಕನಿಷ್ಠ ಪ್ರಯಾಣ ದರ ₹35 ಆಗಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ ₹17 ಶುಲ್ಕ ಪಡೆಯಲಾಗುತ್ತಿತ್ತು. ಕಳೆದ ನಾಲ್ಕು ವರ್ಷಗಳಿಂದ ದರ ಪರಿಷ್ಕರಣೆಯಾಗಿರಲಿಲ್ಲ. ಇದೇ ವೇಳೆ ಎಲ್‌ಪಿಜಿ, ಸಿಎನ್‌ಜಿ, ಇಂಧನ ಹಾಗೂ ಆಟೋ ಬಿಡಿಭಾಗಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣ ದರ ಹೆಚ್ಚಿಸುವಂತೆ ಆಟೋ ಚಾಲಕ ಮತ್ತು ಮಾಲಕರ ಸಂಘಟನೆಗಳು ಮನವಿ ಸಲ್ಲಿಸಿದ್ದವು.


ಚಾಲಕರ ಬೇಡಿಕೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿ RTA ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಬಳಿಕ ಪರಿಷ್ಕೃತ ದರಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.


ಕಾಯುವಿಕೆ ಶುಲ್ಕದಲ್ಲೂ ಬದಲಾವಣೆ


ಹೊಸ ದರಪಟ್ಟಿಯಲ್ಲಿ ಆಟೋ ಕಾಯುವಿಕೆ ಶುಲ್ಕದಲ್ಲೂ ಬದಲಾವಣೆ ಮಾಡಲಾಗಿದೆ. ಮೊದಲ 10 ನಿಮಿಷಗಳ ಕಾಯುವಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಬಳಿಕ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ ವಿಧಿಸಬಹುದು.


ಲಗೇಜ್‌ಗೆ ಸಂಬಂಧಿಸಿದಂತೆ, ಪ್ರತಿ ಪ್ರಯಾಣಿಕರಿಗೆ 20 ಕೆ.ಜಿ.ವರೆಗೆ ಉಚಿತವಾಗಿ ಲಗೇಜ್ ಸಾಗಿಸಲು ಅವಕಾಶವಿದೆ. ಇದಕ್ಕಿಂತ ಹೆಚ್ಚಾಗಿ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹5 ಶುಲ್ಕ ಪಡೆಯಲು ಅನುಮತಿ ನೀಡಲಾಗಿದೆ.


ಇನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಪ್ರಯಾಣಿಸುವವರಿಗೆ ಚಾಲ್ತಿಯಲ್ಲಿರುವ ಮೀಟರ್ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಮೀಟರ್ ಪರಿಷ್ಕರಣೆಗೆ ಸೂಚನೆ


ಪ್ರತಿಯೊಂದು ಆಟೋರಿಕ್ಷಾದಲ್ಲೂ ಪರಿಷ್ಕೃತ ದರಪಟ್ಟಿಯನ್ನು ಪ್ರಯಾಣಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಅಲ್ಲದೆ, ಚಾಲಕರು ತಮ್ಮ ಆಟೋ ಮೀಟರ್‌ಗಳನ್ನು ಪರಿಷ್ಕರಿಸಿ ತಕ್ಷಣವೇ ಸೀಲ್ ಮಾಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.


ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ವಸೂಲಿ ಮಾಡುವುದು ಸೇರಿದಂತೆ ನಿಯಮ ಉಲ್ಲಂಘನೆ ಕಂಡುಬಂದಲ್ಲಿ, ಅಂತಹ ಚಾಲಕರ ವಿರುದ್ಧ ಪರವಾನಗಿ ರದ್ದುಪಡಿಸುವುದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default