ಮುಂಬರುವ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಗೆ ಪ್ರವಾಸಿಗರನ್ನು ಆಕರ್ಷಿಸುವಂತೆ ಸಿದ್ಧತೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ ಸೇರಿದಂತೆ ಮಂಗಳೂರು ನಗರದಲ್ಲಿ ಹಬ್ಬದ ವಾತಾವರಣ ಮೂಡುವ ರೀತಿಯಲ್ಲಿ ಸಿದ್ಧತೆ ಮಾಡಬೇಕು. ಕುದ್ರೋಳಿ ದೇವಸ್ಥಾನ, ಮಂಗಳಾದೇವಿ, ಉರ್ವ ಮಾರಿಯಮ್ಮ ಸೇರಿದಂತೆ ನಗರದಲ್ಲಿ ದಸರಾ ನಡೆಯುವ ಸ್ಥಳಗಳ ಪ್ರಮುಖ ರಸ್ತೆಗಳಲ್ಲಿ, ಪ್ರಮುಖ ಜಂಕ್ಷನ್‍ಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಬೇಕು. ಟ್ರಾಫಿಕ್ ವ್ಯವಸ್ಥೆ ನಿರ್ವಹಿಸಲು ಟ್ರಾಫಿಕ್ ಪೊಲೀಸರನ್ನು ನಿಯೋಜಿಸಬೇಕು. ದಸರಾ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಯಾವುದೇ ಅಡೆತಡೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ನಿರ್ವಹಿಸಬೇಕು ಎಂದರು.
ದಸರಾ ಸಮಯದಲ್ಲಿ ಸಿಟಿ ಬಸ್‍ಗಳು ರಾತ್ರಿ ದೀರ್ಘಕಾಲದವರೆಗೆ ಸಂಚಾರ ನಡೆಸುವಂತೆ ಆರ್.ಟಿ.ಓ ಗಮನಹರಿಸಬೇಕು. ನಗರದಲ್ಲಿ ವಾಣಿಜ್ಯ ವ್ಯಾಪಾರ ಕೇಂದ್ರಗಳು ರಾತ್ರಿ ದೀರ್ಘಕಾಲದವರೆಗೆ ವ್ಯವಹಾರ ನಡೆಸುವಂತಾಗಬೇಕು ಎಂದು ಸಚಿವರು ತಿಳಿಸಿದರು. ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಪೆೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮತ್ತಿತರರು ಇದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

