ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಜೀವನ ದೇಶ ಸೇವೆ, ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮಲ್ಲೇಶ್ವರ-ಸುಬ್ರಹ್ಮಣ್ಯನಗರದ ಮಿಲ್ಕ್ ಕಾಲೋನಿ ನಾಡಪ್ರಭು ಕೆಂಪೇಗೌಡ ಮೈದಾನದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಭವ್ಯ ಗಂಗಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನರೇಂದ್ರ ಮೋದಿ ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸಲಾಗುತ್ತಿದೆ. ಸರ್ಕಾರದ ಮುಖ್ಯಸ್ಥರಾಗಿ ಕಳೆದ 25 ವರ್ಷಗಳಿಂದ ಅವರು ನಿರಂತರವಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರ ಸಾರ್ವಜನಿಕ ಜೀವನ ಮತ್ತು ಸೇವಾ ಮನೋಭಾವದಿಂದ ಎಲ್ಲರೂ ಪ್ರೇರಣೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಅಧಿಕಾರಕ್ಕಿಂತ ದೇಶಸೇವೆಗೆ ಹೆಚ್ಚಿನ ಆದ್ಯತೆ ನೀಡಿರುವುದು ಮೋದಿ ಅವರ ಸಾರ್ವಜನಿಕ ಜೀವನದ ಪ್ರಮುಖ ಅಂಶವಾಗಿದೆ. ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಪ್ರಧಾನಮಂತ್ರಿಯಾಗಿ ದೇಶದ ಆಡಳಿತದ ಜವಾಬ್ದಾರಿ ವಹಿಸಿಕೊಂಡು ಕಳೆದ 12 ವರ್ಷಗಳಿಂದ ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ
ಮೋದಿ ಅವರ ನಾಯಕತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ. ಆತ್ಮನಿರ್ಭರ ಭಾರತದ ಪರಿಕಲ್ಪನೆಯೊಂದಿಗೆ ದೇಶವು ಇತರರನ್ನು ಅನುಸರಿಸುವುದಕ್ಕಿಂತ ತನ್ನದೇ ಆದ ದಾರಿಯನ್ನು ರೂಪಿಸಿಕೊಳ್ಳುವತ್ತ ಸಾಗುತ್ತಿದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಬಡವರಿಗೆ ವಸತಿ, ರೈತರಿಗೆ ಬೆಂಬಲ, ಮಹಿಳೆಯರ ಗೌರವ ಮತ್ತು ಸಬಲೀಕರಣ, ಯುವಜನರಿಗೆ ಹೊಸ ಅವಕಾಶಗಳು ಹಾಗೂ ಸಾಮಾನ್ಯ ಜನರ ಜೀವನದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಿಸುವುದು ಮೋದಿ ಅವರ ಅಭಿವೃದ್ಧಿ ಮಾದರಿಯ ಪ್ರಮುಖ ಅಂಶಗಳಾಗಿವೆ
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಮೋದಿ ಅವರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಬೇಕು
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರ ವಿಶೇಷ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿ ದೀಪ ಬೆಳಗಿಸುವಂತೆ ಅವರು ಮನವಿ ಮಾಡಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸಸಿ ನೆಡುವುದು, ರಕ್ತದಾನ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮೋದಿ ಅವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಲು ಜನರು ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವನ್ನೂ ಆರ್. ಅಶೋಕ್ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

