ಮಂಗಳೂರು: ನಗರದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದಲ್ಲಿ ಬುಧವಾರ ಭಾರೀ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಘಟನೆಯಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಂಆರ್‌ಪಿಎಲ್‌ನ ಮೂರನೇ ಹಂತದ ಘಟಕದಲ್ಲಿ ಸ್ಫೋಟ ಸಂಭವಿಸಿದ ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತ ದಟ್ಟ ಹೊಗೆ ಆವರಿಸಿತ್ತು. ಸ್ಫೋಟದ ಸದ್ದು ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಕೇಳಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಫೋಟದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸುಮಾರು 30 ವರ್ಷದ ಮನೀಷ್ ಎಂಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜೇಶ್ ಎಂಬ ಮತ್ತೊಬ್ಬ ಕಾರ್ಮಿಕನಿಗೆ ಸುಟ್ಟ ಗಾಯಗಳಾಗಿದ್ದು, ದೇಹದ ಸುಮಾರು 30ರಿಂದ 40ರಷ್ಟು ಭಾಗ ಸುಟ್ಟಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹಲವು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಘಟಕದ ಸಮೀಪದಲ್ಲಿರುವ ಶಾಲೆಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಶಾಲೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮೀಪದ ಅಂಗನವಾಡಿಯಲ್ಲಿದ್ದ ಮಕ್ಕಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಕಟ್ಟಡಗಳಲ್ಲೂ ಹಾನಿಯಾಗಿರುವುದು ಕಂಡುಬಂದಿದೆ. ಸ್ಫೋಟದ ವೇಳೆ ಉಂಟಾದ ಕಂಪನದಿಂದ ಕಟ್ಟಡಗಳ ಫಾಲ್ಸ್ ಸೀಲಿಂಗ್ ಕುಸಿದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ
ಊಟದ ಸಮಯವಾಗಿದ್ದರಿಂದ ಹೆಚ್ಚಿನ ಕಾರ್ಮಿಕರು ಘಟಕದಿಂದ ಹೊರಗೆ ತೆರಳಿದ್ದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಎಂಆರ್‌ಪಿಎಲ್ ಅಧಿಕಾರಿಗಳ ಪ್ರಕಾರ, ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಸುಮಾರು 70 ಬಾರ್ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸೆಪರೇಟರ್ ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಘಟಕದ ಬ್ಯಾಟರಿ ಮಿತಿಯನ್ನು ಪ್ರತ್ಯೇಕಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಸದ್ಯ ಘಟಕದಲ್ಲಿ ಕೂಲಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಸಂಪೂರ್ಣ ಪರಿಶೀಲನೆಯ ಬಳಿಕ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದು ತಿಳಿಯಲಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ತುರ್ತು ಸೇವಾ ತಂಡಗಳು ಸ್ಥಳದಲ್ಲೇ ಕಾರ್ಯನಿರ್ವಹಿಸುತ್ತಿವೆ.
ಭಾರೀ ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು ಮನೆಯಿಂದ ಹೊರಬಂದು ಪರಿಸ್ಥಿತಿ ಪರಿಶೀಲಿಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

