}

ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

Prajwal amin
By -
0

 


ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ, ಶಿಕ್ಷಣ, ಆರೋಗ್ಯ ಮತ್ತು ದಾಸೋಹದಂತಹ ನಿರಂತರ ಸೇವಾ ಕಾರ್ಯಗಳ ಮೂಲಕ ಸೇವೆ ಸಲ್ಲಿಸುತ್ತಿರುವ ಕೊಪ್ಪಳದ ಗವಿಮಠದ ಶ್ರೀಗಳಿಗೆ ಈ ಬಾರಿಯ ಮೈಸೂರು ದಸರಾ ಉದ್ಘಾಟನೆಯ ಸೌಭಾಗ್ಯ ಒದಗಿಬಂದಿದೆ. 
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಮಾಡಲು ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರಿಗೆ ಇಂದು ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ಎಸ್‌‍. ತಂಗಡಗಿ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಗೆ  ಆಹ್ವಾನ ನೀಡಿದರು.

 ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಮಂಡಲದ ಸದನದಲ್ಲಿ ಗವಿಸಿದ್ದೇಶ್ವರ ಶ್ರೀಗಳು ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರೆ ಎಂದು ಘೋಷಿಸಿದ ಬಳಿಕ ಇದೀಗ ರಾಜ್ಯ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ. ಮೈಸೂರು ದಸರಾ ಉದ್ಘಾಟಿಸುವ ಗೌರವ ಶ್ರೀಗಳಿಗೆ ಒಲಿದಿರುವುದು ಕೊಪ್ಪಳ ಜಿಲ್ಲೆಯ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಅತೀವ ಹರ್ಷ ತಂದಿದ್ದು, ಜಿಲ್ಲೆಯ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ರಾಜ್ಯಮಟ್ಟದಲ್ಲಿ ದೊಡ್ಡ ಮನ್ನಣೆ ದೊರೆತಂತಾಗಿದೆ.

ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ರಾಜಶೇಖರ್‌ ಹಿಟ್ನಾಳ್‌, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌, ವಿಧಾನ ಪರಿಷತ್‌ ಸದಸ್ಯ ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಸುರೇಶ್‌ ಇಟ್ನಾಳ್‌, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್‌, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಹಾಗೂ ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ್‌ ನಾಗಪ್ಪ ಉಪಸ್ಥಿತರಿದ್ದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default