ಮಂಗಳೂರು : ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂಬ ಅನೇಕ ಟೀಕೆಗಳಿಗೆ ಒಳಗಾಗಿದ್ದ ಈ ಯೋಜನೆಗಳು ಇಂದು ದೇಶಕ್ಕೆ ಮಾದರಿ ಜನಪರ ಯೋಜನೆಗಳಾಗಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಅವರು ಮಂಗಳವಾರ ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ಆಡಳಿತ ವ್ಯವಸ್ಥೆಯಿಂದ ಪರಿಣಾಮಕಾರಿಯಾಗಿ ಅನುμÁ್ಠನಗೊಂಡು ಜನಪರ ಯೋಜನೆಯಾಗಿ ರೂಪುಗೊಂಡಿದೆ. ಇದು ಕೇವಲ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಲ್ಲ, ಬದಲಾಗಿ ಜನರ ಜೀವನದಲ್ಲಿ ಬದಲಾವಣೆ ತಂದಿರುವುದನ್ನು ದಾಖಲೆಗಳ ಮೂಲಕ ತೋರಿಸುವ ಯೋಜನೆಗಳು ಎಂದು ಅವರು ಹೇಳಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ನೀಡಿದ ಅನುದಾನವನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಬೆಳೆಸಿಕೊಂಡು ಗೌರವಯುತವಾದ ಬದುಕು ಸಾಗಿಸುತ್ತಿದ್ದು, ಅವರು ದೇಶದ ಆರ್ಥಿಕ ಶಕ್ತಿಯ ಭಾಗವಾಗಿದ್ದಾರೆ. ಅನೇಕರು ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ ಎಂದು ಸಚಿವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು, ಗೃಹಜ್ಯೋತಿಯಿಂದ ಉಚಿತ ವಿದ್ಯುತ್, ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಅನ್ನಭಾಗ್ಯದಿಂದ ಬಡಕುಟುಂಬಗಳಿಗೆ ಆಹಾರದ ಭದ್ರತೆಗೆ ನೆರವು ಹಾಗೂ ಯುವಜನರಿಗೆ ಆರ್ಥಿಕ ನೆರವು ನೀಡಿ ಜನಜೀವನ ಬದಲಾವಣೆಗೆ ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ. ರೇವಣ್ಣ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಎಂಎ ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಮತಾ ಡಿ ಎಸ್ ಗಟ್ಟಿ, ವಿಧಾನಪರಿಷತ್ ಶಾಸಕ ಐವನ್ ಡಿಸೋಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಉಮರ್ ಯು. ಹೆಚ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ರಫೀಕ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಕಾರ್ಯಕ್ರಮ ಆಯೋಜಿಸಿದ್ದರು.
ಕಾರ್ಯಕ್ರಮದ ಮುಂಚಿತವಾಗಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ. ರೇವಣ್ಣ ಸಂಜೀವಿನಿ ಮಾಸಿಕ ಸಂತೆ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ಶಕುಂತಲಾ ಶೆಣೈ ಸ್ವಾಗತಿಸಿ, ಗ್ರಾಮೀಣ ಉದ್ಯೋಗ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ನಿರೂಪಿಸಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

