}

ಭ್ರಷ್ಟಾಚಾರ ಪ್ರಕರಣ: ಬೆಳ್ತಂಗಡಿ ಎಸ್‌ಐಟಿ ತಂಡದಲ್ಲಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅಮಾನತು

suddilive.com
By -
0

 



ಬೆಳ್ತಂಗಡಿ, ಸೆ. 1: ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಅಮಾನತುಗೊಳಿಸಲಾಗಿದೆ.


ವಿನೋದ್ ರೆಡ್ಡಿ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.


ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಹಾಗೂ ಮಾಸಿಕ ವಸೂಲಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ ಎನ್ನಲಾದ ಆಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಆಗಸ್ಟ್ 31ರಂದು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.


ವಿಚಾರಣೆಯ ಬಳಿಕ ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಣ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


ಹಳಿಯಾಳ ಠಾಣೆಯಿಂದ ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ವರ್ಗಾವಣೆಯಾಗಿದ್ದರೂ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ ಬಳಿಕ ಅವರು ಬೆಳ್ತಂಗಡಿಯಲ್ಲಿ ಎಸ್‌ಐಟಿ ತಂಡದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು.


ಬುರುಡೆ ಪ್ರಕರಣದ ತನಿಖೆಯಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ಇದೀಗ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವುದು ಪ್ರಕರಣದ ತನಿಖಾ ತಂಡದ ಮೇಲೆಯೂ ಗಮನ ಸೆಳೆದಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default