ಬೆಂಗಳೂರು: ರಾಜ್ಯ ಸರ್ಕಾರದ ಮಹತ್ಶವಾಕಾಂಕ್ಷಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಪಡೆಯುತ್ತಿರುವ ರಾಜ್ಯದ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕಾರ್ಡ್ ನೀಡುವ ಕುರಿತು ಸಿದ್ಧತೆ ನಡೆಯುತ್ತಿದೆ. ಯೋಜನೆಯ ದುರುಪಯೋಗ ತಡೆಯುವುದು ಹಾಗೂ ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಸುಮಾರು ಒಂದು ಕೋಟಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಸುಮಾರು ₹250 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಪ್ರಸ್ತಾವಿತ ಸ್ಮಾರ್ಟ್ ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಫೋಟೋ, ಆಧಾರ್ ಸಂಖ್ಯೆ ಹಾಗೂ ವಿಳಾಸ ಸೇರಿದಂತೆ ಅಗತ್ಯ ವಿವರಗಳನ್ನು ನಮೂದಿಸಲಾಗುತ್ತದೆ
ಸದ್ಯ ಶಕ್ತಿ ಯೋಜನೆಯಡಿ ಪ್ರಯಾಣಿಸುವಾಗ ಮಹಿಳೆಯರು ಗುರುತಿನ ಚೀಟಿಯಾಗಿ ಆಧಾರ್ ಸೇರಿದಂತೆ ವಿವಿಧ ದಾಖಲೆಗಳನ್ನು ಬಳಸುತ್ತಿದ್ದಾರೆ. ಆದರೆ ಹೊಸ ವ್ಯವಸ್ಥೆ ಜಾರಿಗೆ ಬಂದರೆ ಸ್ಮಾರ್ಟ್ ಕಾರ್ಡ್ ಮೂಲಕ ಫಲಾನುಭವಿಗಳನ್ನು ಗುರುತಿಸುವ ವ್ಯವಸ್ಥೆ ಜಾರಿಗೆ ಬರುತ್ತದೆ.
ಸ್ಮಾರ್ಟ್ ಕಾರ್ಡ್ ಪಡೆಯಲು ಮತದಾರರ ಗುರುತಿನ ಚೀಟಿ ಸೇರಿದಂತೆ ಕೆಲವು ದಾಖಲೆಗಳನ್ನು ಪರಿಗಣಿಸುವ ಕುರಿತು ಚರ್ಚೆ ನಡೆಯುತ್ತಿದೆ . ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ನೆಲೆಸಿರುವವರು, ಆದರೆ ಮತದಾರರ ಗುರುತಿನ ಚೀಟಿ ಬೇರೆ ರಾಜ್ಯದಲ್ಲಿರುವವರು ಹೊಸ ವ್ಯವಸ್ಥೆಯಲ್ಲಿ ಹೇಗೆ ಒಳಗೊಳ್ಳುತ್ತಾರೆ ಎಂಬ ಪ್ರಶ್ನೆಯೂ ಎದುರಾಗಿದೆ. ಈ ಬಗ್ಗೆ ಸರ್ಕಾರದ ಅಂತಿಮ ಮಾರ್ಗಸೂಚಿಗಳು ಸ್ಪಷ್ಟವಾದ ಬಳಿಕವೇ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.
ಶಕ್ತಿ ಯೋಜನೆಯ ದುರುಪಯೋಗವಾಗುತ್ತಿದೆ ಎಂಬ ಆರೋಪಗಳು ಹಾಗೂ ಅನರ್ಹರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಫಲಾನುಭವಿಗಳ ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಸ್ಮಾರ್ಟ್ ಕಾರ್ಡ್ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಬಳಕೆಯನ್ನು ಹೆಚ್ಚು ನಿಯಂತ್ರಿತಗೊಳಿಸುವ ಉದ್ದೇಶ ಹೊಂದಲಾಗಿದೆ ಎನ್ನಲಾಗಿದೆ.
ಮಹಿಳೆಯರ ಜೊತೆಗೆ ತೃತೀಯ ಲಿಂಗಿಗಳಿಗೂ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆ ಕುರಿತು ಚರ್ಚೆ ನಡೆದಿದೆ. ಕಾರ್ಡ್ ವಿತರಣೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ವ್ಯವಸ್ಥೆ ರೂಪಿಸುವ ಸಾಧ್ಯತೆಯಿದ್ದು, ಬಾಪೂಜಿ ಸೇವಾ ಕೇಂದ್ರ, ಸೈಬರ್ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇರಿದಂತೆ ವಿವಿಧ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಕೆ ಮತ್ತು ಕಾರ್ಡ್ ಪಡೆಯುವ ವ್ಯವಸ್ಥೆ ಕಲ್ಪಿಸಬಹುದು.
ಆದರೆ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗುವ ದಿನಾಂಕ, ಅರ್ಹತಾ ಮಾನದಂಡಗಳು ಹಾಗೂ ಇತರ ರಾಜ್ಯಗಳ ಮತದಾರರ ಗುರುತಿನ ಚೀಟಿ ಹೊಂದಿರುವವರ ವಿಚಾರದಲ್ಲಿ ಅನ್ವಯವಾಗುವ ನಿಯಮಗಳ ಬಗ್ಗೆ ಸರ್ಕಾರದಿಂದ ಅಧಿಕೃತವಾಗಿ ಅಂತಿಮ ಮಾಹಿತಿ ಹೊರಬಂದ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

