ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ 5ನೇ ವರ್ಷದ ಉಡುಪಿ-ಉಚ್ಚಿಲ ದಸರಾ-2026ರ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ. ಶಂಕರ್ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 11ರಿಂದ 21ರವರೆಗೆ ಉಚ್ಚಿಲದಲ್ಲಿ ದಸರಾ ಉತ್ಸವ ನಡೆಯಲಿದ್ದು, ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೆ.ಎಸ್. ಬಸಂತಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಎಂ. ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಶದ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಇದೇ ವೇಳೆ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ಒಂಬತ್ತನೇ ಗುರುಗಳಾದ ಮಾದವ ಮಂಗಳಢ ಪೂಜಾರ್ ಅವರ ಕಂಚಿನ ಪುತ್ಥಳಿಯನ್ನು ಸೆಪ್ಟೆಂಬರ್ 25ರಂದು ಸಚಿವ ಶಿವರಾಜ್ ತಂಗಡಗಿ ಅನಾವರಣಗೊಳಿಸಲಿದ್ದಾರೆ .
ಕಾರ್ಯಕ್ರಮದ ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿದರು.
ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರಾ ಮಲ್ಪೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ವೇದಪ್ರಕಾಶ್ ಶ್ರೀಯಾನ್, ರತ್ನಾಕರ್ ಸಾಲ್ಯಾನ್ ಮಲ್ಪೆ, ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ. ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದರ್, ದಿನೇಶ್ ಎರ್ಮಾಳು, ಮನೋಜ್ ಕಾಂಚನ್ ಎರ್ಮಾಳ್, ದಿನೇಶ್ ಮೂಳೂರು, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ಶಿವಪ್ಪ ಕಾಂಚನ್ ಮಲ್ಪೆ, ಸತೀಶ್ ಕುಂದರ್ ಮಲ್ಪೆ, ನಾರಾಯಣ ಸಿ. ಕರ್ಕೇರ, ಸುಗುಣ ಎಸ್. ಕರ್ಕೇರ ಹಾಗೂ ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

