}

ಉಡುಪಿ: ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Prajwal amin
By -
0


ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿತು.


ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ  ಆಕ್ರೋಶ ಹೊರಹಾಕಿದರು. ತದನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಮುಖ್ಯ ದ್ವಾರದ ಬಳಿಯೇ ತಡೆದರು. ಈ ವೇಳೆ ಕೆಲವರು ಗೇಟ್ ಏರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರೆ, ಇನ್ನು ಕೆಲವರು ಗೇಟ್ ಮುಂಭಾಗದಲ್ಲೇ ಧರಣಿ ಕುಳಿತು ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದರು.

ಇದಕ್ಕೂ ಮುನ್ನ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರೆ ವರೋನಿಕಾ ಕರ್ನೆಲಿಯೋ ಹಾಗೂ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು, ಪ್ರಶಾಂತ್ ಜತ್ತನ್ನ, ಪ್ರಖ್ಯಾತ್ ಶೆಟ್ಟಿ, ಹರಿಪ್ರಸಾದ್ ರೈ, ಜ್ಯೋತಿ ಹೆಬ್ಬಾರ್, ಹಬೀಬ್ ಅಲಿ, ಶಬ್ಬೀರ್ ಉಡುಪಿ, ಶೇಖ್ ವಾಹೀದ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default