}

ವಾರಂಬಳ್ಳಿಯಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ: ಕಾಮಗಾರಿ ಸ್ಥಳ ಪರಿಶೀಲಿಸಿದ ಶಾಸಕ ಯಶ್ ಪಾಲ್ ಸುವರ್ಣ

Prajwal amin
By -
0


 ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಇಎಸ್‌ಐ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.


ವಾರಂಬಳ್ಳಿ ಗ್ರಾಮದ 5.13 ಎಕರೆ ಜಾಗದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಹಾಗೂ ಸಿಬ್ಬಂದಿಗಾಗಿ 32 ವಸತಿ ಗೃಹಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಮಂಜೂರು ಮಾಡಿದೆ. ಸದ್ಯ ಸುಮಾರು ₹2 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ಆವರಣದ ಕಾಂಪೌಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.


ಆಸ್ಪತ್ರೆ ನಿರ್ಮಾಣವಾಗಲಿರುವ ಪ್ರದೇಶದ ಸುತ್ತಮುತ್ತ ಜನವಸತಿ ಇರುವ ಹಿನ್ನೆಲೆಯಲ್ಲಿ, ಕಾಮಗಾರಿ ಆರಂಭಿಸುವ ಮುನ್ನ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಮುಖಂಡರೊಂದಿಗೆ ಯೋಜನೆಯ ಕುರಿತು ಸಮಾಲೋಚನೆ ನಡೆಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚಿಸಿದರು.


ಮಳೆ ನೀರು ಸರಾಗವಾಗಿ ಹರಿದುಹೋಗುವ ವ್ಯವಸ್ಥೆ, ರಸ್ತೆ ಸಂಪರ್ಕ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ಹಾಗೂ ವ್ಯವಸ್ಥಿತ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.


ಪರಿಶೀಲನೆ ವೇಳೆ ಇಎಸ್‌ಐ ಇಲಾಖೆಯ ಉಪ ನಿರ್ದೇಶಕ ಜತಿನ್ ಮೀನಾ, ಸಾಮಾಜಿಕ ಭದ್ರತಾ ಅಧಿಕಾರಿ ವಿನಾಯಕ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಿತ್ಯಾನಂದ ಬಿ.ಆರ್., ಸ್ಥಳೀಯ ಮುಖಂಡರಾದ ರಾಜೇಶ್ ಶೆಟ್ಟಿ ಬಿರ್ತಿ, ಎಸ್. ನಾರಾಯಣ, ನವೀನ್ ಚಂದ್ರ ನಾಯಕ್, ನಿರಂಜನ್ ಶೆಟ್ಟಿ, ದೇವಾನಂದ, ನಾಗವೇಣಿ, ಉಮಾ ಬಾಯಿ, ರಾಜೀವ ಕುಲಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default