}

ವೇಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿಟ್ವೆಂಟಿ ಪಂದ್ಯಕ್ಕೆ ಆರ್‌ಸಿಬಿ ವೇಗಿ ಭುವನೇಶ್ವರ್ ಕುಮಾರ್ ಭಾರತ ತಂಡಕ್ಕೆ ಸೇರ್ಪಡೆ

Prajwal amin
By -
0

 


ಸುದ್ದಿ ಲೈವ್ ವರದಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಾ ಇರುವ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ ಅಂತಿಮ ಹಾಗೂ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ


ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಅಂತಿಮ ಪಂದ್ಯಕ್ಕೆ ಆರ್ಸಿಬಿ ತಂಡದ ವೇಗಿ ಭುವನೇಶ್ವರ್ ಕುಮಾರ್ ಆಯ್ಕೆಯಾಗಿದ್ದಾರೆ.


ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲ ಅಕ್ಟೋಬರ್ 17ರಂದು ನಡೆಯಲಿರುವ ಐದನೇ ಟಿ20 ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಕುರಿತು ಅಧಿಕೃತ ಮಾಹಿತಿ ನೀಡಿದೆ.


ಹೈದರಾಬಾದ್ ನಲ್ಲಿ ನಡೆದ ನಾಲ್ಕನೇ ಟಿ ಟ್ವೆಂಟಿ ಪಂದ್ಯದ ವೇಳೆ ಭಾರತ ತಂಡದ ಪ್ರಮುಖ ಬೌಲರ್ ಹಾಗೂ ವೇಗಿ ಆರ್ಶ್‌ದೀಪ್ ಸಿಂಗ್ ಅವರಿಗೆ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುತ್ತಿದ್ದಾಗ ಅವರ ಬೌಲಿಂಗ್ ಭುಜಕ್ಕೆ ಚೆಂಡು ಬಡಿದಿತ್ತು. ನೋವಿನ ಹಿನ್ನೆಲೆಯಲ್ಲಿ ಅವರು ಮೈದಾನದಿಂದ ಹೊರನಡೆದಿದ್ದರು. ಆದರೆ  ಸಿಂಗ್ ಅವರನ್ನ ತಂಡದಿಂದ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲವಾದರೂ ಭುವನೇಶ್ವರ್ ಕುಮಾರ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.  


ಇನ್ನು ಭುವನೇಶ್ವರ್ ಕುಮಾರ್ ಅವರಿಗೆ ಭಾರತ ತಂಡದಲ್ಲಿ ಮಿಂಚಲು ಮತ್ತೊಮ್ಮೆ ಅವಕಾಶ ಸಿಕ್ಕಿದಂತಾಗಿದೆ ಈ ಹಿಂದೆ ಅವರು 2022ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ತಮ್ಮ ಕೊನೆಯ ಪಂದ್ಯವನ್ನ ಆಡಿದ್ದರು. 


ಐಪಿಎಲ್ ನಲ್ಲಿ ಆರ್‌ಸಿಬಿ ತಂಡದ ಪರ ಕಣಕ್ಕಿಳಿದಿದ್ದ ಭುವನೇಶ್ವರ್ ಕುಮಾರ್ ಆರ್‌ಸಿಬಿ ಆರ್‌ಸಿಬಿ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದರು ೊತೆಗೆ ಆರ್‌ಸಿಬಿ ಫೈನಲ್ ಪಂದ್ಯ ಗೆಲ್ಲಲು ಕೂಡ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಸಹಕಾರಿಯಾಗಿತ್ತು ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧ ಸರಣಿಗಳ ಅಂತಿಮ ಹಾಗೂ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ.


ವೆಸ್ಟ್ ಇಂಡೀಸ್ ವಿರುದ್ಧ 5ನೇ ಟಿ ಟ್ವೆಂಟಿ ಪಂದ್ಯ ಬಹಳ ಮಹತ್ವದ್ದಾಗಿದೆ ಈಗಾಗಲೇ ಎರಡು ಎರಡು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳು ಸರಣಿಯಲ್ಲಿ ಸಮಬಲವನ್ನು ಕಾಯ್ದುಕೊಂಡಿದೆ ಹೀಗಾಗಿ ಅಂತಿಮ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತೆ? ಸರಣಿಯನ್ನು ವಶಪಡಿಸಿಕೊಳ್ಳಲಿದೆ. 


ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್ ಮತ್ತು ಭುವನೇಶ್ವರ್ ಕುಮಾರ್.









About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default