ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ನೂತನ ರಾಜ್ಯಪಾಲೆ ಸುಧಾ ಯಾದವ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಹರ್ಯಾಣ ಮೂಲದವರಾದ ಸುಧಾ ಯಾದವ್ ಅವರು ಬಿಜೆಪಿಯ ಹಿರಿಯ ಬಿಜೆಪಿ ನಾಯಕಿ, 1999ರಿಂದ 2004ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ತದನಂತರ ಬಿಜೆಪಿಯ ಹಲವು ಸಂಘಟನಾ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು. ಬಿಜೆಪಿಯ ಉನ್ನತ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಂಸದೀಯ ಮಂಡಳಿಯ ಸದಸ್ಯರಾಗಿದ್ದರು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದಗಡಿ ಭದ್ರತಾ ಪಡೆ (BSF)ಯ ಡೆಪ್ಯುಟಿ ಕಮಾಂಡೆಂಟ್ ಆಗಿದ್ದ ಸುಖ್ಬೀರ್ ಸಿಂಗ್ ಅವರ ಪತ್ನಿ ಸುಧಾ ಯಾದವ್. ಸುಧಾ ಯಾದವ್ ಅವರು ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ. ಮತ್ತು ಪಿಎಚ್ಡಿ ಪದವಿ ಪಡೆದಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್, ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡಲಾಯಿತು. ಇದೇ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಡಿಕೆ ಶಿವಕುಮಾರ್ ಸರ್ಕಾರ ರಾಜ್ಯದ ಕಾರ್ಯಕ್ರಮದಲ್ಲಿ ಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

