}

ಸಿದ್ದಗಂಗಾ ಶ್ರೀಗಳ ವಿರುದ್ಧ ಹೇಳಿಕೆ: ಅಶೋಕ್ ಕೇಣಿ ವಿರುದ್ಧ ಪೊಲೀಸ್ ದೂರು

Prajwal amin
By -
0


ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಕುರಿತು ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ಸಲ್ಲಿಸಲಾಗಿದೆ.


ವಿಜಯಸೇನೆ ರಾಜ್ಯಾಧ್ಯಕ್ಷ ದೀಪಕ್ ಅವರು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಮಠ ಹಾಗೂ ಶ್ರೀಗಳ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಶೋಕ್ ಖೇಣಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.


ಇತ್ತೀಚೆಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಶೋಕ್ ಕೇಣಿ ಅವರು ಸಿದ್ದಗಂಗಾ ಮಠಕ್ಕೆ ಭಕ್ತರು ನೀಡುವ ಚಿನ್ನವನ್ನು ಕರಗಿಸಿ ಮಾರಾಟ ಮಾಡಲಾಗುತ್ತದೆ ಎಂಬರ್ಥದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳು ತಮ್ಮ ಕೊನೆಯ ದಿನಗಳಲ್ಲಿ ಚಿನ್ನದ ಕಡಗವೊಂದನ್ನು ನೀಡುವಂತೆ ತಮ್ಮನ್ನು ಕೇಳಿದ್ದರು ಮತ್ತು ಅದನ್ನು ಸ್ವಾಮೀಜಿಗಳ ಸಮಾಧಿಯಲ್ಲಿ ಇರಿಸಲಾಗಿದೆ ಎಂಬ ರೀತಿಯ ಹೇಳಿಕೆಯನ್ನೂ ನೀಡಿದ್ದರು 


ಈ ಹೇಳಿಕೆಗಳಿಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ ನೀಡಿದ್ದಾರೆ. ಅಶೋಕ್ ಕೇಣಿ ಅವರು ಶಿವಕುಮಾರ ಸ್ವಾಮೀಜಿಗಳಿಗೆ ಯಾವುದೇ ಚಿನ್ನದ ಕಡಗ ನೀಡಿಲ್ಲ. ಅವರು ನೀಡಿದ ವಸ್ತುವಿನ ಕುರಿತು ಮಠದಲ್ಲಿ ಯಾವುದೇ ದಾಖಲೆ ಅಥವಾ ಮಾಹಿತಿ ಇಲ್ಲ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.


ಶಿವಕುಮಾರ ಸ್ವಾಮೀಜಿಗಳು ಧರಿಸುತ್ತಿದ್ದ ಚಿನ್ನದ ಕಡಗವನ್ನು ಹುಲಿಕುಂಟೆ ಸೋಮಣ್ಣ ಎಂಬ ಭಕ್ತರು ನೀಡಿದ್ದರು ಎಂದು ಮಠದ ವತಿಯಿಂದ ಸ್ಪಷ್ಟಪಡಿಸಲಾಗಿದೆ. ಹಲವು ತಿಂಗಳ ಕಾಲ ಒತ್ತಾಯ ಮಾಡಿದ ಬಳಿಕ, ಸ್ವಾಮೀಜಿಗಳು ಅದನ್ನು ಸ್ವೀಕರಿಸಿದ್ದರು ಎನ್ನಲಾಗಿದೆ. ಅದರ ಬದಲಿಗೆ ಮಕ್ಕಳಿಗಾಗಿ ಎರಡು ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಸ್ವಾಮೀಜಿ ಸೂಚಿಸಿದ್ದರು ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.


ಮಠಕ್ಕೆ ಭಕ್ತರು ಅಥವಾ ದಾನಿಗಳು ನೀಡುವ ವಸ್ತುಗಳ ವಿವರಗಳನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಇದೆ. ಹೀಗಾಗಿ ಅಶೋಕ್ ಕೇಣಿ ಅವರು ಹೇಳಿರುವ ರೀತಿಯಲ್ಲಿ ಯಾವುದೇ ಚಿನ್ನದ ಕಡಗವನ್ನು ಅವರು ನೀಡಿರುವ ದಾಖಲೆ ಮಠದಲ್ಲಿ ಇಲ್ಲ ಎಂದು ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟಪಡಿಸಿದ್ದಾರೆ.


ಈ ನಡುವೆ, ಖೇಣಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಭಕ್ತರಲ್ಲಿಯೂ ಅಸಮಾಧಾನ ವ್ಯಕ್ತವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ದೀಪಕ್ ಅವರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.



About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default