}

ಬಂಟ್ವಾಳ: ವರುಣನ ಅಬ್ಬರ: ಮೂರು ಮನೆಗಳ ಮೇಲೆ ಬಿದ್ದ ಮರ, ತಪ್ಪಿದ ಭಾರಿ ಅನಾಹುತ

Prajwal amin
By -
0

 


ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸುರಿದ ಭಾರಿ ಬಿರುಗಾಳಿ ಮಳೆಯಿಂದಾಗಿ ಮೂರು ಮನೆಗಳ ಮೇಲೆ ಮರಗಳು ಉರುಳಿಬಿದ್ದಿದ್ದು, ಮನೆಗಳು ಭಾಗಶಃ ಹಾನಿಗೀಡಾಗಿವೆ. ಅದೃಷ್ಟವಶಾತ್ ಈ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಟ್ಲ ಕಸಬಾ ಗ್ರಾಮದ ಅಪ್ಪೇರಿ ಪಾದೆ ನಿವಾಸಿಗಳಾದ ಜಯಂತಿ ಮತ್ತು ವಿಜಯ ಭಂಡಾರಿ, ಪುಣಚ ಗ್ರಾಮದ ಅಜೇರು ಎಂಬಲ್ಲಿನ ಪ್ರಭಾಕರ ಪ್ರಭು ಹಾಗೂ ವಿಟ್ಲ ಮುಡ್ನೂರು ಗ್ರಾಮದ ಕೇಪುಳಗುಡ್ಡೆಯ ಸುಂದರಿ ಎಂಬುವವರ ಮನೆಗಳ ಮೇಲೆ ಮರಗಳು ಬಿದ್ದಿವೆ. ಈ ಮೂರೂ ಘಟನೆಗಳಲ್ಲಿ ಮನೆಗಳ ಛಾವಣಿಗಳಿಗೆ ಹಾನಿಯಾಗಿದ್ದರೂ, ಮನೆಯಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮರ ಬಿದ್ದು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಮಾಹಿತಿ ರವಾನಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಹಾನಿಯ ನಿಖರ ಪ್ರಮಾಣ ತಿಳಿದುಬರಬೇಕಿದೆ.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default