ಬೆಂಗಳೂರು: ಸಿನಿಮಾ ನೋಡಲು ಥಿಯೇಟರ್‌ಗೆ ತೆರಳುವ ಪ್ರೇಕ್ಷಕರಿಗೆ ಸದ್ಯಕ್ಕೆ ಕೊಂಚ ರಿಲೀಫ್ ಸಿಕ್ಕಿದೆ. ರಾಜ್ಯ ಸರ್ಕಾರ ವಿಧಿಸಲು ಮುಂದಾಗಿದ್ದ ಶೇಕಡ 2ರ ಹೆಚ್ಚುವರಿ ಸೆಸ್ ಜಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಸೆಪ್ಟೆಂಬರ್ 30ರಿಂದ ಈ ಹೆಚ್ಚುವರಿ ಸೆಸ್ ಜಾರಿಗೆ ಬರಬೇಕಿತ್ತು. ಆದರೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸದ್ಯಕ್ಕೆ ಚಿತ್ರಮಂದಿರಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಾಯ್ದೆ, 2024ರ ಅಡಿಯಲ್ಲಿ ಸೆಸ್ ಸಂಗ್ರಹಿಸಿ ಕನ್ನಡ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು ಹಾಗೂ ಸಾಂಸ್ಕೃತಿಕ ಕಲಾವಿದರ ಸಾಮಾಜಿಕ ಭದ್ರತೆಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಆದರೆ ಹೆಚ್ಚುವರಿ ಸೆಸ್ ವಿಧಿಸುವ ಸರ್ಕಾರದ ನಿರ್ಧಾರದಿಂದ ಚಿತ್ರಮಂದಿರ ಮಾಲೀಕರಿಗೆ ಸಮಸ್ಯೆಯಾಗಲಿದೆ ಎಂದು ಫಿಲಂ ಚೇಂಬರ್ ಆಕ್ಷೇಪ ವ್ಯಕ್ತಪಡಿಸಿತ್ತು. ಸೆಸ್‌ನಿಂದ ಚಿತ್ರಮಂದಿರಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಜೊತೆಗೆ ಚಿಲ್ಲರೆ ಹಣದ ನಿರ್ವಹಣೆಯಲ್ಲೂ ತೊಂದರೆ ಎದುರಾಗಬಹುದು ಎಂದು ಮಂಡಳಿ ತಿಳಿಸಿತ್ತು.
ಈ ವಿಚಾರದಲ್ಲಿ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 26ಕ್ಕೆ ಮುಂದೂಡಲಾಗಿದೆ.
ಹೀಗಾಗಿ ಶೇ.2ರ ಹೆಚ್ಚುವರಿ ಸೆಸ್‌ನಿಂದ ಟಿಕೆಟ್ ದರದಲ್ಲಿ ತಕ್ಷಣದ ಏರಿಕೆಯಾಗುವ ಆತಂಕದಲ್ಲಿದ್ದ ಸಿನಿಪ್ರಿಯರಿಗೆ ಸದ್ಯಕ್ಕೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

