}

ದಕ್ಷಿಣ ಕನ್ನಡದಲ್ಲಿ ವೋಟರ್ ಲಿಸ್ಟ್ ಅಕ್ರಮ? ಫಾರ್ಮ್ 7 ಬಳಸಿ ಅಲ್ಪಸಂಖ್ಯಾತರ ಹೆಸರು ಅಳಿಸಲು ಬಿಜೆಪಿ ಹುನ್ನಾರ ಎಂದ ಕಾಂಗ್ರೆಸ್

Prajwal amin
By -
0

 


ಮಂಗಳೂರು: ಚುನಾವಣಾ ಆಯೋಗದ 'ನಮೂನೆ 7' (ಫಾರ್ಮ್ 7) ಅನ್ನು ಅಕ್ರಮವಾಗಿ ಬಳಸಿಕೊಂಡು ಮತದಾರರ ಪಟ್ಟಿಯಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರ ಹೆಸರುಗಳನ್ನು ಅಳಿಸಿಹಾಕಲು ಬಿಜೆಪಿ ವ್ಯವಸ್ಥಿತ ಹುನ್ನಾರ ನಡೆಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗಂಭೀರ ಆರೋಪ ಮಾಡಿದೆ.


ಈ ಸಂಬಂಧ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಕಾಂಗ್ರೆಸ್ ನಿಯೋಗ, ಅಪರ ಜಿಲ್ಲಾಧಿಕಾರಿ ರಾಜು ಕೆ. ಅವರಿಗೆ ಮನವಿ ಸಲ್ಲಿಸಿದ್ದು, ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ.


ದೂರು ನೀಡಿದ ಬಳಿಕ ಮಾಹಿತಿ ಹಂಚಿಕೊಂಡ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕುಗಳಲ್ಲಿ ಬಿಜೆಪಿ ಕಚೇರಿಯಿಂದಲೇ ಮುಂಚಿತವಾಗಿ ಮುದ್ರಿಸಿದ ಫಾರ್ಮ್ 7 ಅರ್ಜಿಗಳನ್ನು ಭರ್ತಿ ಮಾಡಿ ಚುನಾವಣಾ ಶಾಖೆಗೆ ಸಲ್ಲಿಸಲಾಗಿದೆ ಎಂದು ದೂರಿದರು. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಸಾಕ್ಷ್ಯಾಧಾರಗಳಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.


ಬೆಳ್ತಂಗಡಿಯ ಆಯ್ದ ಕೆಲವೇ ಬೂತ್‌ಗಳಲ್ಲಿ ಬರೋಬ್ಬರಿ 275 ಹಾಗೂ ಪುತ್ತೂರಿನ ಕೇವಲ ಎರಡು ಬೂತ್‌ಗಳಲ್ಲಿ 19 ಅಲ್ಪಸಂಖ್ಯಾತ ಮತದಾರರ ಹಕ್ಕನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಅರ್ಜಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಂತೂ ಬಿಜೆಪಿ ತನ್ನ ಅಧಿಕೃತ ಲೆಟರ್ ಹೆಡ್ ಬಳಸಿಯೇ ಅಲ್ಪಸಂಖ್ಯಾತರ ಹೆಸರು ವಜಾಗೊಳಿಸುವಂತೆ ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಎಂದು ಶಾಹುಲ್ ಹಮೀದ್ ಅಸಮಾಧಾನ ವ್ಯಕ್ತಪಡಿಸಿದರು.


ಚುನಾವಣಾ ನಿಯಮಗಳ ಅನ್ವಯ, ಮತದಾರರ ಪಟ್ಟಿಯಿಂದ ಯಾವುದೇ ವ್ಯಕ್ತಿಯ ಹೆಸರನ್ನು ತೆಗೆದುಹಾಕಲು ಅರ್ಜಿ ಸಲ್ಲಿಸುವವರು ಅದಕ್ಕೆ ಸೂಕ್ತ ಕಾರಣ ಮತ್ತು ಆಧಾರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಆದರೆ, ನಿಯಮಗಳನ್ನು ಗಾಳಿಗೆ ತೂರಿ ದುರುದ್ದೇಶದಿಂದ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜೊತೆಗೆ, ನಿರ್ದಿಷ್ಟ ವ್ಯಕ್ತಿಗಳು, ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳಿಂದ ಬೃಹತ್ ಪ್ರಮಾಣದಲ್ಲಿ ಸಲ್ಲಿಕೆಯಾಗಿರುವ ಫಾರ್ಮ್ 7 ಅರ್ಜಿಗಳ ಬಗ್ಗೆ ವಿಶೇಷ ತನಿಖೆ ನಡೆಸಿ, ಪ್ರತಿಯೊಂದು ಅರ್ಜಿಯನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದರು.


ಜಿಲ್ಲಾಡಳಿತಕ್ಕೆ ದೂರು ನೀಡಿದ ನಿಯೋಗದಲ್ಲಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಕಾಶ್ ಸಿಕ್ಕೇರಾ, ಉಪಾಧ್ಯಕ್ಷರಾದ ಜಾರ್ಜ್ ಟಿ.ವಿ. ಹಾಗೂ ಸಬಿತಾ ಮಿಸ್ಕಿತ್, ಎಸ್‌ಸಿ/ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು, ಕೋಶಾಧಿಕಾರಿ ಮಹಮ್ಮದ್ ಬಪ್ಪಳಿಗೆ, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್ ಮತ್ತು ಹಬೀಬುಲ್ಲಾ ಖಾಲಿದ್ ಪುಲಾಬೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default