}

ಮಂಗಳೂರಿನ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಎಂಆರ್‌ಪಿಎಲ್ ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ದಾಖಲು

Prajwal amin
By -
0


ಮಂಗಳೂರು: ನಗರದ ಜೋಕಟ್ಟೆ ಸಮೀಪದ ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದರು.


ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಯಾಳು ರವಿ ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಘಟಕದಲ್ಲಿ ಸೂಕ್ತ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಸ್ಫೋಟ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ದೂರಿನ ಹಿನ್ನೆಲೆಯಲ್ಲಿ ಎಂಆರ್‌ಪಿಎಲ್‌ನ ಸಿಎಚ್‌ಟಿ (CHT) ಯೂನಿಟ್ ಘಟಕದ ಮುಖ್ಯಸ್ಥ ಹಾಗೂ ಎಂಆರ್‌ಪಿಎಲ್ ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಸ್ಫೋಟದ ಪರಿಣಾಮ ಓರ್ವ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದರು. ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತು ಸೂರತ್ಕಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default