ಮೈಸೂರು: ನಾಡಹಬ್ಬ ಮೈಸೂರು ದಸರಾ-2026ರ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ಐದನೇ ದಿನದ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು. ಮೈಸೂರಿನ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಮಂದಿ ಸೇರಿದ್ದರು.
ಕಾರ್ಯಕ್ರಮ ಮುಕ್ತಾಯದ ಹಂತದಲ್ಲಿದ್ದ ವೇಳೆ ಬ್ಯಾರಿಕೇಡ್ವೊಂದು ಸಡಿಲಗೊಂಡಿದೆ. ಈ ಸಂದರ್ಭದಲ್ಲಿ ಮುಂಭಾಗದಿಂದ ಕಾರ್ಯಕ್ರಮವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಯುವಕರು ಮತ್ತು ಯುವತಿಯರು ಏಕಕಾಲದಲ್ಲಿ ಮುಂದೆ ಸಾಗಲು ಮುಂದಾಗಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ತಳ್ಳಾಟ, ನೂಕಾಟದ ಪರಿಸ್ಥಿತಿ ನಿರ್ಮಾಣವಾಯಿತು.
ಪರಿಸ್ಥಿತಿಯನ್ನು ಗಮನಿಸಿದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಜನರನ್ನು ನಿಯಂತ್ರಿಸಿದರು. ಬಳಿಕ ಜನರನ್ನು ಸರಿಯಾಗಿ ವ್ಯವಸ್ಥೆಗೊಳಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಪೊಲೀಸರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಅನಾಹುತವೊಂದು ತಪ್ಪಿದಂತಾಗಿದೆ.
ಯುವ ಸಂಭ್ರಮ ದಸರಾ ಕಾರ್ಯಕ್ರಮಗಳ ಮುನ್ನೋಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಜನರು ದಸರಾ ಕಾರ್ಯಕ್ರಮಗಳಿಗೆ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಈಗ ನಡೆದಿರುವ ಘಟನೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಕೆಯ ಸಂದೇಶವಾಗಿದೆ.
ದಸರಾ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡಿಂಗ್, ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ, ಜನದಟ್ಟಣೆ ನಿಯಂತ್ರಣ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಅಗತ್ಯವಿದೆ. ಜನದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಸಾರ್ವಜನಿಕರೂ ಸಹ ಆತುರಪಡದೆ, ಸುರಕ್ಷತೆಗೆ ಆದ್ಯತೆ ನೀಡಬೇಕು.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

