ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿರುವ ಬೆನ್ನಲ್ಲೇ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಸೆಷನ್ಸ್ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಇಬ್ಬರೂ ಸಾಕ್ಷಿಗಳಾಗಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
ಆರೋಪಿ ದರ್ಶನ್ ಅವರೊಂದಿಗೆ ಚಿಕ್ಕಣ್ಣ ಸಂಪರ್ಕ ಹೊಂದಿದ್ದರು. ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಅವರು ಸ್ಟೋನಿ ಬ್ರೂಕ್‌ನಲ್ಲಿ ಇದ್ದರು ಎಂಬ ವಿಚಾರ ಪ್ರಕರಣದ ತನಿಖೆಯ ವೇಳೆ ಹೊರ ಬಂದಿತ್ತು. ಇದೇ ಹಿನ್ನೆಲೆಯಲ್ಲಿ ಚಿಕ್ಕಣ್ಣ ಅವರ ಹೇಳಿಕೆಯನ್ನು ಈಗ ನ್ಯಾಯಾಲಯದ ವಿಚಾರಣೆಯಲ್ಲಿ ದಾಖಲಿಸಿಕೊಳ್ಳಲು ಮುಂದಾಗಿದೆ.
ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಮಾರ್ಚ್ ವೇಳೆಗೆ ವಿಚಾರಣೆಯನ್ನು ಪೂರ್ಣಗೊಳಿಸುವ ಉದ್ದೇಶವಿದೆ. ಅದರ ಭಾಗವಾಗಿ ಬಾಕಿ ಇರುವ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.
ಪೊಲೀಸರ ಮುಂದೆ ಚಿಕ್ಕಣ್ಣ ಈಗಾಗಲೇ ಹೇಳಿಕೆ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ದಿನ ಪವನ್ ಸ್ಟೋನಿ ಬ್ರೂಕ್‌ಗೆ ಬಂದು ದರ್ಶನ್ ಅವರ ಕಿವಿಯಲ್ಲಿ ಕೆಲವು ಮಾಹಿತಿಗಳನ್ನು ಹೇಳಿದ್ದ ಎನ್ನಲಾಗಿದ್ದು, ಅದಕ್ಕೂ ಮುನ್ನ ದರ್ಶನ್, ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರು ಚಲನಚಿತ್ರವೊಂದರ ವಿಚಾರವಾಗಿ ಮಾತುಕತೆ ನಡೆಸುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಲಭ್ಯವಾಗಿತ್ತು. ಈ ಸಂಬಂಧ ಪ್ರದೋಷ್ ಕೂಡ ಹೇಳಿಕೆ ನೀಡಿದ್ದರು.
ಪ್ರದೋಷ್ ನೀಡಿದ ಹೇಳಿಕೆಯ ನಂತರ ಪ್ರಕರಣದ ಘಟನೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ದೃಢಪಡಿಸಿಕೊಳ್ಳುವ ನಿಟ್ಟಿನಲ್ಲಿ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರನ್ನು ವಿಚಾರಣೆಗೆ ಕರೆಸಲಾಗುತ್ತಿದೆ. ಪವನ್ ಸ್ಟೋನಿ ಬ್ರೂಕ್‌ನಲ್ಲಿರುವ ಹೋಟೆಲ್-ಪಬ್‌ಗೆ ಬಂದಿದ್ದನಾ, ಅಲ್ಲಿ ದರ್ಶನ್‌ಗೆ ಮಾಹಿತಿ ನೀಡಿದ್ದನಾ ಮತ್ತು ನಂತರ ದರ್ಶನ್ ಅಲ್ಲಿಂದ ತೆರಳಿದ್ದರೇ ಎಂಬ ವಿಚಾರಗಳನ್ನು ಇಬ್ಬರ ಹೇಳಿಕೆಗಳ ಮೂಲಕ ಖಚಿತಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.
ಈ ಪ್ರಕರಣದಲ್ಲಿ ದರ್ಶನ್ ಜಾಮೀನಿನ ಮೇಲೆ ಹೊರಬಂದ ಬಳಿಕ ಚಿಕ್ಕಣ್ಣ ಸೇರಿದಂತೆ ಸಾಕ್ಷಿಗಳೊಂದಿಗೆ ಗುರುತಿಸಿಕೊಂಡಿದ್ದ ವಿಚಾರವೂ ಚರ್ಚೆಗೆ ಬಂದಿತ್ತು. ಇದೀಗ ಪ್ರಕರಣದ ವಿಚಾರಣೆಯ ಭಾಗವಾಗಿ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಅವರಿಗೆ ಕೋರ್ಟ್ ಸಮನ್ಸ್ ನೀಡಲಾಗಿದೆ.
About the Author
PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

