}

ಸೌಜನ್ಯ ಪ್ರಕರಣ: ಮರುತನಿಖೆಗೆ ಸುಪ್ರೀಂ ಆದೇಶ, ಬೆಳ್ತಂಗಡಿಯಲ್ಲಿ ಬೃಹತ್ 'ನ್ಯಾಯದ ನಡಿಗೆ'

Prajwal amin
By -
0

 


ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ, ಇಷ್ಟು ವರ್ಷಗಳ ಕಾಲ ಸಂತ್ರಸ್ತೆಗೆ ನ್ಯಾಯ ಒದಗಿಸಲು ನಿರಂತರವಾಗಿ ಶ್ರಮಿಸಿದ ವಕೀಲರು ಹಾಗೂ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಅಕ್ಟೋಬರ್ 10ರಂದು ಬೆಳ್ತಂಗಡಿಯಲ್ಲಿ ಬೃಹತ್ 'ನ್ಯಾಯದ ನಡಿಗೆ' ಮೌನ ಮೆರವಣಿಗೆ ಮತ್ತು ಗೌರವ ಅಭಿನಂದನಾ ಸಭೆಯನ್ನು ಆಯೋಜಿಸಲಾಗಿತ್ತು.


ಅಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಉಜಿರೆಯ ಕುಂಜರ್ಪದಿಂದ ಮೌನ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪ್ರಕರಣದಲ್ಲಿ ಶೀಘ್ರ ನ್ಯಾಯದ ನಿರೀಕ್ಷೆಯಲ್ಲಿರುವ ಸಾವಿರಕ್ಕೂ ಅಧಿಕ ಮಂದಿ ಸಾರ್ವಜನಿಕರು ಬೆಳ್ತಂಗಡಿ ಮುಖ್ಯರಸ್ತೆಯ ಮುಖಾಂತರ ಸಾಗಿ ತಾಲೂಕು ಕ್ರೀಡಾಂಗಣದವರೆಗೆ ಹೆಜ್ಜೆ ಹಾಕಿದರು.


ಮೆರವಣಿಗೆಯ ಬಳಿಕ ಕ್ರೀಡಾಂಗಣದಲ್ಲಿ ಅಭಿನಂದನಾ ಸಭೆ ಜರುಗಿತು. ವೇದಿಕೆಯಲ್ಲಿ ಸೌಜನ್ಯ ಪರ ದನಿ ಎತ್ತಿದ್ದ ಪ್ರಮುಖ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಮಹಿಳಾ ಮುಖಂಡೆ ಪ್ರಸನ್ನ ರವಿ, ಹೈಕೋರ್ಟ್ ವಕೀಲ ಮೋಹಿತ್ ಕುಮಾರ್ ಹಾಗೂ ದೈವ ಚಿಂತಕ ತಮ್ಮಣ್ಣ ಶೆಟ್ಟಿ ಉಪಸ್ಥಿತರಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಣ್ಯರು ಹಾಗೂ ಸೌಜನ್ಯಳ ತಾಯಿ ಕುಸುಮಾವತಿ ಅವರು, ಮುಂದಿನ ದಿನಗಳಲ್ಲಾದರೂ ನೈಜ ಅಪರಾಧಿಗಳಿಗೆ ಶಿಕ್ಷೆಯಾಗಿ, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.


ಈ ಮಹತ್ವದ ಕಾರ್ಯಕ್ರಮದಲ್ಲಿ ಕಾನೂನು ಹೋರಾಟದಲ್ಲಿ ಕೈಜೋಡಿಸಿದ ವಕೀಲರಾದ ವಿಜಯ ವಾಸು ಪೂಜಾರಿ, ನವೀನ್ ಕುಮಾರ್, ದಿನೇಶ್ ಗಾಣಿಗ ಕುಂದಾಪುರ ಸಾಕ್ಷಿಯಾದರು. ಇವರೊಂದಿಗೆ ನೀತಿ ತಂಡದ ಜಯಂತ್ ಟಿ., ಅಹೋರಾತ್ರ, ಸುಪ್ರೀಂಕೋರ್ಟ್ ವಕೀಲ ಶೇಖರ್ ಜಿ. ದೇವಸ್ಯ ಅವರ ಸಹೋದರ ಕೃಷ್ಣಪ್ಪ ಗೌಡ ದೇವಸ್ಯ ಮತ್ತು ಮುಂಬೈನಲ್ಲಿ ಈ ಹೋರಾಟಕ್ಕೆ ಜನಬೆಂಬಲ ರೂಪಿಸುವಲ್ಲಿ ಶ್ರಮಿಸಿದ ಸುರೇಶ್ ಎಯ್ಯಾಡಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಸೌಜನ್ಯ ಪರವಾದ ಈ ಒಗ್ಗಟ್ಟಿನ ಪ್ರದರ್ಶನಕ್ಕೆ ಸಾವಿರಾರು ಸಂಖ್ಯೆಯ ಜನಸ್ತೋಮ ಬೆಂಬಲ ಸೂಚಿಸಿತು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default