}

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ

Prajwal amin
By -
0

 


ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕರಿಕ್ಕಳ–ನಿಂತಿಕಲ್ಲು ಮಾರ್ಗದ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.


ಶಾಸಕಿ ತಮ್ಮ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮುಚ್ಚಿಲ ಬಳಿ ಶಾಸಕರ ಕಾರಿನ ಮುಂಭಾಗದಲ್ಲಿ ಸಾಗುತ್ತಿದ್ದ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಶಾಸಕರ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗದ ಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿದ್ದವರು ಆತಂಕಗೊಂಡರಾದರೂ, ಕಾರಿನಲ್ಲಿದ್ದ ಶಾಸಕಿ ಹಾಗೂ ಚಾಲಕ ಸುರಕ್ಷಿತವಾಗಿರುವುದು ತಿಳಿದುಬಂದಿದೆ.


ಬಳಿಕ ಸ್ಥಳಕ್ಕೆ ಬಂದ ಮತ್ತೊಂದು ವಾಹನದ ಮೂಲಕ ಶಾಸಕಿ ಭಾಗೀರಥಿ ಮುರುಳ್ಯ ಅವರು ತಮ್ಮ ನಿವಾಸದತ್ತ ತೆರಳಿದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default