}

ಎಸ್‌ಐಆರ್‌ ಪ್ರಕ್ರಿಯೆ ತಕ್ಷಣ ನಿಲ್ಲಿಸಿ: ಚುನಾವಣಾ ಆಯೋಗದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

Prajwal amin
By -
0


 ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬರುತ್ತಿದ್ದು, ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆಯೂ ಅನುಮಾನಗಳು ಮೂಡಿವೆ ಎಂದು ಹೇಳಿದರು.


ಬಿಜೆಪಿ ಹಾಗೂ ಚುನಾವಣಾ ಆಯೋಗದ ನಡುವೆ ಹೊಂದಾಣಿಕೆ ಇದೆ, ಇದು ವ್ಯವಸ್ಥಿತ ಚುನಾವಣಾ ಅಕ್ರಮಕ್ಕೆ ಕಾರಣವಾಗುತ್ತಿದೆ “ಇದು ಆರ್ಗನೈಸ್ಡ್ ಎಲೆಕ್ಷನ್ ಫ್ರಾಡ್” ಎಂದು ಅವರು ಗಂಭೀರ ಆರೋಪ ಮಾಡಿದರು.


ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಬಳಸಲಾಗುವ ಫಾರ್ಮ್‌-7ರ ದುರುಪಯೋಗವಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಮಾತನಾಡಿದ ಅವರು, ಸುಳ್ಳು ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಿ ಅಕ್ರಮವಾಗಿ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ ಬಳಿಕ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದ ಯತೀಂದ್ರ, ಎಸ್‌ಐಆರ್‌ ಪ್ರಕ್ರಿಯೆ ಆರಂಭದಿಂದಲೂ ಹಲವು ಅನುಮಾನಗಳಿಗೆ ಕಾರಣವಾಗಿದೆ ಇದೀಗ ಫಾರ್ಮ್‌-7ರ ದುರುಪಯೋಗದ ಆರೋಪಗಳು ಮತ್ತಷ್ಟು ಗಂಭೀರವಾಗಿವೆ ಎಂದು ಹೇಳಿದರು.


“ಎಸ್‌ಐಆರ್‌ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ನಂತರ ಸರಿಯಾದ ರೀತಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಬೇಕು” ಎಂಬುದು ತಮ್ಮ ಆಗ್ರಹವಾಗಿದೆ ಅಧಿಕಾರಿಗಳು ಚುನಾವಣಾ ಆಯೋಗದ ಆದೇಶದಂತೆ ಕಾರ್ಯನಿರ್ವಹಿಸುತ್ತಾರೆ. ಆದರೆ ಚುನಾವಣಾ ಆಯೋಗವೇ ರಾಜಕೀಯವಾಗಿ ರಾಜಿ ಮಾಡಿಕೊಂಡಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.


ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಹಲವು ಆರೋಪಗಳು ಬಂದಿದ್ದರೂ ಅವುಗಳಿಗೆ ಸೂಕ್ತ ಉತ್ತರ ನೀಡುತ್ತಿಲ್ಲ  ಬದಲಾಗಿ, ಪ್ರಶ್ನೆ ಮಾಡುವ ರಾಜಕೀಯ ಪಕ್ಷಗಳು ಮತ್ತು ನಾಯಕರನ್ನೇ ಟೀಕಿಸುವ ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ  ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅದರ ಜವಾಬ್ದಾರಿ ಬಹಳ ಮಹತ್ವದ್ದಾಗಿದೆ. ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳು ನಡೆಯದಿದ್ದರೆ ಪ್ರಜಾಪ್ರಭುತ್ವದ ಮೇಲೆಯೇ ಪರಿಣಾಮ ಬೀರುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.


ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಚುನಾವಣಾ ಆಯುಕ್ತರು ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಸ್ಪಷ್ಟನೆ ನೀಡಬೇಕು. ಆ ಮೂಲಕ ಚುನಾವಣಾ ಆಯೋಗದ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

About the Author

PRAJWAL prajwal covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default